ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭಿಸಲಾಗುವುದು.
ಹಾಗೆ ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು. ಇನ್ನು ಕಡಿಮೆ ಆದಾಯದ ಜನಸಂಖ್ಯೆ ಹೆಚ್ಚಾಗಿ ವಾಸಿಸುತ್ತಿರುವ ಪ್ರದೇಶದಲ್ಲಿ, ವಲಸೆ ಮತ್ತು ಭೂರಹಿತ ಕಾರ್ಮಿಕರಿರುವ ಸ್ಥಳದಲ್ಲಿ 1,655 ಕೇಂದ್ರಗಳನ್ನು ಹಾಗೂ ಗ್ರಾಮಾಂತರ ಪ್ರದೇಶದಲ್ಲಿ 1,655 ಅಂಗನವಾಡಿ ಕೇಂದ್ರಗಳ ಸ್ಥಾಪನೆ ಮಾಡಲಾಗುವುದು.
ರಾಜ್ಯ ಸರ್ಕಾರ ಅಂಗನವಾಡಿಗಳಿಗೆ 268.98 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದು, ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆಯಡಿ ಅಂಗನವಾಡಿ ಪ್ರಾರಂಭಿಸಲಾಗುವುದು.