ನ.6ಕ್ಕೆ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2022 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನವೆಂಬರ್ 6 ರಂದು ನಡೆಸಲಾಗುವುದು. ಈ ಕುರಿತಂತೆ ಸಾರ್ವಜನಿಕ ಇಲಾಖೆ ಅಧಿಸೂಚನೆ ಪ್ರಕಟಿಸಿದೆ.

Ad Widget ... ..

ಒಂದರಿಂದ ಐದನೇ ತರಗತಿವರೆಗೆ ಪಾಠ ಮಾಡುವ ಶಿಕ್ಷಕರಿಗೆ ಪತ್ರಿಕೆ -1 ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ. ಆರರಿಂದ ಎಂಟನೇ ತರಗತಿಗೆ ಪಾಠ ಮಾಡುವ ಶಿಕ್ಷಕರಿಗೆ ಪತ್ರಿಕೆ -2 ಮಧ್ಯಾಹ್ನ 2 ರಿಂದ ಸಂಜೆ 4:30ರ ವರೆಗೆ ಪರೀಕ್ಷೆ ನಡೆಯಲಿದೆ.

Ad Widget

ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ಅಕ್ಟೋಬರ್ 21 ರಿಂದ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಕೆ ಮತ್ತು ವಿವರಗಳಿಗಾಗಿ schooleducation.kar.nic.in ವೆಬ್ ಸೈಟ್ ಗಮನಿಸಬಹುದಾಗಿದೆ.

Leave a Comment

Your email address will not be published. Required fields are marked *