ಶೀಘ್ರದಲ್ಲೇ 900 ಪಿಎಸ್ಐ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ| ನೇಮಕಾತಿಯಲ್ಲಿ ಈ ಬಾರಿ ಅಕ್ರಮ ನಡೆಯಲ್ಲ ಎಂದ ಗೃಹ ಸಚಿವ ಆರಗ‌ ಜ್ಞಾನೇಂದ್ರ

ಸಮಗ್ರ ನ್ಯೂಸ್: ಈಗಾಗಲೇ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ ಮಾಡಿದ್ದಾರೆ.

Ad Widget ... ..

ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು‌ ಅನುಕರಣೀಯ ಸಂಗತಿಯಾಗಿದೆ. ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿತ್ತು .ಈಗ ವಾರ್ಷಿಕ‌ 100 ಕ್ಕೂ ಹೆಚ್ಚು ಠಾಣೆಗಳನ್ನು ನಿರ್ಮಿಸಲಾಗುತ್ತಿದೆ. ಶೇ.35 ರಷ್ಟಿದ್ದ ಖಾಲಿ ಹುದ್ದೆಗಳ ಪ್ರಮಾಣವನ್ನು ಶೇ.12 ಕ್ಕೆ ಇಳಿಕೆ ಮಾಡಲಾಗಿದೆ ಎಂದರು.

Ad Widget

ಶೀಘ್ರದಲ್ಲಿಯೇ 900 ಪಿಎಸ್‌ಐಗಳ ನೇಮಕಾತಿ ನಡೆಯಲಿದೆ. ನೇಮಕಾತಿಯಲ್ಲಿ ಶೇ.20 ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು. ಪೊಲೀಸ್ ಇಲಾಖೆಗೆ ಈ ವರ್ಷ ಅತ್ಯಂತ ಸವಾಲಿನದಾಗಿತ್ತು. ಹುಬ್ಬಳ್ಳಿ ಗಲಭೆಯನ್ನು ಇಲ್ಲಿನ ಪೊಲೀಸ್ ಆಯುಕ್ತ ಲಾಭೂರಾಮ್ ನೇತೃತ್ವದ ತಂಡ ಅತ್ಯಂತ ಸಮರ್ಥವಾಗಿ ಹಾಗೂ ಕ್ಷಿಪ್ರವಾಗಿ ತಹಬಂದಿಗೆ ತರುವ ಮೂಲಕ ಇಲ್ಲಿನ ಪೊಲೀಸರು ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು‌.

ಈ ಬಾರಿ ನೇಮಕಾತಿಯು ಪಾರದರ್ಶಕವಾಗಿ ನಡೆಯಲಿದ್ದು ಯಾವುದೇ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಇದೇ ವೇಳೆ ಸ್ಪಷ್ಟಪಡಿಸಿದರು.

Leave a Comment

Your email address will not be published. Required fields are marked *