Ad Widget .

ಮುರುಘಾಶ್ರೀ ಗಳ ಪ್ರಕರಣದ 3 ನೇ ಅರೋಪಿ ಬಂಧನ! ಕೇಸ್ ಇನ್ನಷ್ಟು ಬಿಗಿ

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು 3ನೇ ಆರೋಪಿ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget . Ad Widget .

ಪೊಲೀಸರಿಂದ ಮರಿಸ್ವಾಮಿ ಬಸವಾದಿತ್ಯ ಬಂಧನ
ಹೊಸಪೇಟೆಯಲ್ಲಿ ಆರೋಪಿ ಬಸವಾದಿತ್ಯರನ್ನ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.ಮುರುಘಾ ಮಠದ ಮರಿಸ್ವಾಮಿ ಬಸವಾದಿತ್ಯರನ್ನ ಪೊಲೀಸರು ಹೊಸಪೇಟೆಯಲ್ಲಿ ವಶಕ್ಕೆ ಪಡೆದಿದ್ದು, ಹೊಸಪೇಟೆಯಿಂದ ಚಿತ್ರದುರ್ಗಕ್ಕೆ ಕರೆತರಲಾಗುತ್ತಿದೆ.

Ad Widget . Ad Widget .

ಮುರುಘಾ ಶ್ರೀಗಳ ಬಂಧನವಾಗ್ತಿದ್ದಂತೆ ಆರೋಪಿ ಬಸವಾದಿತ್ಯ ಪರಾರಿಯಾಗಿ, ಭಕ್ತರ ಮನೆಯಲ್ಲಿ ಅಡಗಿ ಕುಳಿತಿದ್ದ. ಇದೀಗ ಪೊಲೀಸರು ಬಂಧಿಸಿದ್ದಾರೆ.ಚಿತ್ರದುರ್ಗ ಗ್ರಾಮೀಣ ಠಾಣೆಗೆ ಕರೆತಂದ ನಂತರ ಬಂಧನದ ಪ್ರಕ್ರಿಯೆಯನ್ನು ಪೊಲೀಸರು ಪೂರ್ಣಗೊಳಿಸಲಿದ್ದಾರೆ.

Leave a Comment

Your email address will not be published. Required fields are marked *