Ad Widget .

ಎಸ್ಸಿ, ಎಸ್ಟಿ‌ ಬಿಪಿಎಲ್ ಪಡಿತರದಾರರಿಗೆ ಬಿಗ್ ಶಾಕ್| ಉಚಿತ ವಿದ್ಯುತ್ ಹಿಂಪಡೆದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿತ್ತು. ಇದೀಗ ಈ ಯೋಜನೆಯನ್ನು ಹಿಂಪಡೆದು, ಬಿಗ್ ಶಾಕ್ ನೀಡಿದೆ.

Ad Widget . Ad Widget .

ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಭಾಗ್ಯಜ್ಯೋತಿ, ಕುಟೀರಜ್ಯೋತಿ ಒಳಗೊಂಡಂತೆ 75 ಯುನಿಟ್ ಮಾಸಿಕ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು ಎಂದಿದ್ದಾರೆ.

Ad Widget . Ad Widget .

ಈ ಯೋಜನೆಯ ಸಂಬಂಧ ಸರ್ಕಾರದಿಂದ ಹೊರಡಿಸಿದ್ದ ಸುತ್ತೋಲೆಯನ್ನು, ಈ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂಬುದಾಗಿ ಆದೇಶಿಸಿದ್ದಾರೆ. ಈ ಮೂಲಕ 75 ಯುನಿಟ್ ಉಚಿತ ವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದು, ಎಸ್ಸಿ, ಎಸ್ಟಿ ಸಮುದಾಯದವರಿಗೆ ಬಿಗ್ ಶಾಕ್ ನೀಡಿದೆ.

Leave a Comment

Your email address will not be published. Required fields are marked *