ಉಚಿತ ವಿದ್ಯುತ್ ಯೋಜನೆ ಕೈಬಿಟ್ಟಿಲ್ಲ, ಮಾರ್ಗಸೂಚಿ ಪರಿಷ್ಕರಿಸಿದ್ದೇವೆ – ಸಚಿವ ಸುನಿಲ್‌ಕುಮಾರ್

ಸಮಗ್ರ ನ್ಯೂಸ್: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ ಎನ್ನುವ ಚರ್ಚೆ ನಡೆದಿದೆ.

. Ad Widget . Ad Widget . Ad Widget .

ಈ ಕುರಿತು ಸ್ಪಷ್ಟನೆ ನೀಡಿರುವ ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಯೋಜನೆ ಅನುಷ್ಠಾನದ ಆದೇಶ ರದ್ದಾಗಿಲ್ಲ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮಾರ್ಗಸೂಚಿಗಳನ್ನು ನೀಡಿದ್ದ ಸುತ್ತೋಲೆಯನ್ನು ಮಾತ್ರ ಹಿಂಪಡೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಫಲಾನುಭವಿಗಳ ಆಯ್ಕೆಗಾಗಿ ನಿಗದಿಪಡಿಸಲಾಗಿದ್ದ ಕೆಲವು ಮಾನದಂಡಗಳನ್ನು ಪರಿಷ್ಕರಿಸಲು ತೀರ್ಮಾನಿಸಲಾಗಿದ್ದು, ಈ ಕಾರಣದಿಂದ ಸುತ್ತೋಲೆ ರದ್ದು ಮಾಡಲಾಗಿದೆ ಎಂದು ಹೇಳಿದ್ದಾರೆ

Leave a Comment

Your email address will not be published. Required fields are marked *