Ad Widget .

ಭಾರೀ ಮಳೆಗೆ ಉದ್ಯೋಗದಲ್ಲಿದ್ದ ಯುವತಿ ಮೃತ್ಯು

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಮಳೆಗೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆಯೊಂದು ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.

Ad Widget . Ad Widget .

ಅಖಿಲಾ (23) ಮೃತ ಯುವತಿ. ಬಿಕಾಂ ಪದವೀಧರೆಯಾಗಿದ್ದ ಅಖಿಲಾ ಖಾಸಗಿ ಶಾಲೆಯೊಂದರಲ್ಲಿ ಕಳೆದ ಎರಡು ವರ್ಷದಿಂದ ಅಡ್ಮಿನಿಸ್ಟ್ರೇಷನ್ ಡಿಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದರು.

Ad Widget . Ad Widget .

ತಂದೆ ತಾಯಿ ಜೊತೆಗೆ ಸಿದ್ದಾಪುರದಲ್ಲಿರುವ ಮನೆಯಲ್ಲಿ ವಾಸವಾಗಿದ್ದರು. ಆದರೆ ಸೋಮವಾರ ರಾತ್ರಿ 8 ಗಂಟೆಗೆ ಕೆಲಸ ಮುಗಿಸಿಕೊಂಡು ಶಾಲೆಯಿಂದ ಹೊರಟಿದ್ದರು.

ರಾತ್ರಿ 9.30ಕ್ಕೆ ಸಿದ್ದಾಪುರ ಬಳಿ ಇರುವ ಮಯೂರ ಬೇಕರಿ ಸಮೀಪ ಬಂದಿದ್ದಾರೆ. ಈ ವೇಳೆ ಭಾರೀ ಮಳೆ ಸುರಿಯುತ್ತಿದ್ದ ರಸ್ತೆಯಲ್ಲಿ ಮಂಡಿ ತನಕ ನೀರು ನಿಂತಿತ್ತು. ನೀರಿನ ಮಧ್ಯೆಯೇ ಸ್ಕೂಟರ್ ಚಲಾಯಿಸಿಕೊಂಡು ಬಂದ ಅಖಿಲಾ ಅವರು ಸ್ಕೂಟರ್ ನೀರು ಹೆಚ್ಚಿದ್ದರಿಂದ ಇದ್ದಕ್ಕಿದ್ದಂತೆ ಆಫ್ ಆಗಿದೆ.

ಈ ವೇಳೆ ಕೆಳಗೆ ಬೀಳುತ್ತಿದ್ದ ಅಖಿಲಾ ಸಹಾಯಕ್ಕೆ ಬಲ ಭಾಗದಲ್ಲಿಯೇ ಇದ್ದ ಎಲೆಕ್ಟ್ರಿಕಲ್ ಪೋಲ್ ಮುಟ್ಟಿದ್ದಾರೆ.

ಈ ವೇಳೆ ವಿದ್ಯುತ್ ಸ್ಪರ್ಶವಾಗಿ ಸಾವನ್ನಪ್ಪಿದ್ದಾರೆ

Leave a Comment

Your email address will not be published. Required fields are marked *