Ad Widget .

ಕೆಪಿಟಿ ಕಾಲೇಜಿನ ವಿದ್ಯಾರ್ಥಿ ನಾಪತ್ತೆ

ಬೆಳ್ತಂಗಡಿ : ಮಂಗಳೂರಿನ ಕೆಪಿಟಿ ಕಾಲೇಜಿನ ವಿದ್ಯಾರ್ಥಿ ಮನೆಯಿಂದ ಮಂಗಳೂರಿನ ಕೆ.ಪಿ.ಟಿ ಕಾಲೇಜಿಗೆ ಹೋಗಿ ನಾಪತ್ತೆಯಾದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Ad Widget . Ad Widget .

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ನೇರೊಳ್ ಪಲ್ಕೆ ಮನೆ ನಿವಾಸಿ ಮುರಳಿಧರ್ ಎಂಬವರ ಪುತ್ರ, 21 ವರ್ಷದ ಕೌಶಿಕ್ ಕೆ. ನಾಪತ್ತೆಯಾದವನು.

Ad Widget . Ad Widget .

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಧರ್ಮಸ್ಥಳ ಪೊಲೀಸರಿಗೆ ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಕೋರಿ ಪೊಲೀಸರು ಪ್ರಕಟಣೆ ನೀಡಿದ್ದಾರೆ.

ಕೌಶಿಕ್ ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದಾರೆನ್ನಲಾಗಿದೆ. ಮನೆಯವರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಸುಳಿವು ಸಿಕ್ಕಿಲ್ಲ. ಇದರಿಂದ ಧರ್ಮಸ್ಥಳ ಪೊಲೀಸ್ ಠಾಣೆಗೆ ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದಾರೆ.

ಕೌಶಿಕ್ ಬಗ್ಗೆ ಮಾಹಿತಿ ಸಿಕ್ಕಿದ್ದಲ್ಲಿ ಪೊಲೀಸರಿಗೆ ಮಾಹಿತಿ ನೀಡಲು ಲುಕ್ ಔಟ್ ನೋಟಿಸ್ ಪ್ರಕಟಣೆ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *