Ad Widget .

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿ ಮೃತ್ಯು

ಸಮಗ್ರ ನ್ಯೂಸ್: ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.

Ad Widget . Ad Widget .

ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಮೃತಪಟ್ಟ ವಿದ್ಯಾರ್ಥಿನಿ. ಕವಿತಾ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಸೆ. 6ರ ಮಂಗಳವಾರ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕರೆದೊಯ್ಯಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸೆ.7ರಂದು ಕೊನೆಯುಸಿರೆಳೆದಿದ್ದಾಳೆ.

Ad Widget . Ad Widget .

ಕವಿತಾ ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದು, ಕಲಿಕೆಯಲ್ಲಿ ಮುಂದಿದ್ದಳು. ಸೆ.12ರಂದು ಪರೀಕ್ಷೆ ನಡೆಯಲಿದ್ಸು, ಇದರ ತಯಾರಿಯಲ್ಲಿದ್ದಳು ಎನ್ನಲಾಗಿದೆ.

Leave a Comment

Your email address will not be published. Required fields are marked *