ಕಡಬ: ಮರದ ಕೊಂಬೆ ಕಡಿಯುವ ವೇಳೆ ವಿದ್ಯುತ್ ಶಾಕ್; ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಮರದ ಕೊಂಬೆ ಕಡಿಯುವಾಗ ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘೋರ ಘಟನೆ ಕಡಬದಲ್ಲಿ ನಡೆದಿದೆ. ಮೃತಪಟ್ಟವನನ್ನು ಕುಂತೂರು ಕಾಲಾಯಿಲ್ ನಿವಾಸಿ ಮನೋಜ್(43) ಎಂದು ಗುರುತಿಸಲಾಗಿದೆ.

Ad Widget ... ..

ಮನೋಜ್ ಅವರು ಮರದ ಕೊಂಬೆಯೊಂದು ಕಡಿಯುವಾಗ 33 kv ವಿದ್ಯುತ್ ತಂತಿ ತಾಗಿ ದುರ್ಮರಣ ಸಂಭವಿಸಿದೆ. ಮನೋಜ್ ಮೃತದೇಹ ಮರದಲ್ಲೇ ನೇತಾಡುತ್ತಿತ್ತು. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ತರಲಾಗಿದೆ.
ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Ad Widget

Leave a Comment

Your email address will not be published. Required fields are marked *