Ad Widget .

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ|ಕುಟುಂಬದ ಭ್ರಷ್ಟಾಚಾರ ಆರೋಪ ಮರುವಿಚಾರಣೆಗೆ ಆದೇಶಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ಸಂಬಂಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ ನೀಡಿದೆ.‌ ಪ್ರಾಸಿಕ್ಯೂಷನ್​​ಗೆ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾಗೊಂಡಿತ್ತು. ಸದ್ಯ ಈಗ ಹೈಕೋರ್ಟ್ ವಿಚಾರಣಾ ಕೋರ್ಟ್​​​ ವಜಾ ಆದೇಶ ರದ್ದುಪಡಿಸಿದೆ. ಪ್ರಕರಣ ಮರು ವಿಚಾರಣೆಗೆ ಆದೇಶಿಸಿದೆ.

Ad Widget . Ad Widget .

ಬಿಎಸ್ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ,‌ ಶಶಿಧರ ಮರಡಿ, ಸಂಜಯ್​​ಶ್ರೀ, ಚಂದ್ರಕಾಂತ ರಾಮಲಿಂಗಮ್, ಎಸ್​.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಕೇಸ್ ದಾಖಲಾಗಿತ್ತು. ದೂರುದಾರ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಅಮಿಕಸ್ ಕ್ಯೂರಿಯಾಗಿ ವೆಂಕಟೇಶ್ ಅರಬಟ್ಟಿ ವಾದಿಸಿದ್ದರು. ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಿ ಹೈಕೋರ್ಟ್​ಗೆ ಬಿಎಸ್​ವೈ ಪರ ವಕೀಲ ಸಂದೀಪ್ ಪಾಟೀಲ್ ಮನವಿ ಮಾಡಿದ್ದಾರೆ. ಕಾಲಾವಕಾಶದ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಮಾನಿಸಲಿ ಎಂದು ಬಿ.ಎಸ್.ಯಡಿಯೂರಪ್ಪ ಪರ ವಕೀಲರಿಗೆ ಹೈಕೋರ್ಟ್ ಪ್ರತಿಕ್ರಿಯೆ ನೀಡಿದೆ.

Ad Widget . Ad Widget .

ಕೆಲ ದಿನಗಳ ಹಿಂದೆಯಷ್ಟೇ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮತ್ತು ಅವರ ಕುಟುಂಬದವರ ವಿರುದ್ಧದ ಭ್ರಷ್ಟಾಚಾರ ಆರೋಪ ಪ್ರಕರಣವನ್ನು ಸಿಬಿಐ ಅಥವಾ ಎಸ್‌ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪಿಐಎಲ್ ಸಲ್ಲಿಸುವುದಕ್ಕೆ ಅವಕಾಶ ನೀಡುವಂತೆ ಹೈಕೋರ್ಟ್​ನಲ್ಲಿ ಟಿ.ಜೆ.ಅಬ್ರಹಾಂ ಅರ್ಜಿ ಸಲ್ಲಿಸಿದ್ದರು. ಆದರೆ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್​, ಈ ಹಿಂದೆ ಅರ್ಜಿದಾರರು ಖಾಸಗಿ ದೂರು ಸಲ್ಲಿಸಿದ್ದ ಹಿನ್ನೆಲೆ ಈಗಿನದನ್ನು ಪಿಐಎಲ್ ಆಗಿ ಪರಿಗಣಿಸಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ತಿರಸ್ಕರಿಸಿತ್ತು.

Leave a Comment

Your email address will not be published. Required fields are marked *