ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪ| ನಿವೃತ್ತ ಅಧಿಕಾರಿಗೆ ಬಿತ್ತು 1.30 ಕೋಟಿ ದಂಡ

ಸಮಗ್ರ ನ್ಯೂಸ್: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀನುಗಾರಿಕೆ ನಿರ್ದೇಶನಾಲಯದ ನಿವೃತ್ತ ಜಂಟಿ ನಿರ್ದೇಶಕ ಗಂಗಾಧರ ವಿ. ಮಡ್ಡಿಕೇರಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷಗಳ ಕಾಲ ಸಾದಾ ಸಜೆ ಮತ್ತು 1.30 ಕೋ.ರೂ.ದಂಡ ವಿಧಿಸಿ ಶಿಕ್ಷೆ ವಿಧಿಸಿದೆ.

Ad Widget ... ..

ಗಂಗಾಧರ ವಿ. ಮಡ್ಡಿಕೇರಿ ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅವರ ವಿರುದ್ಧ ಮಂಗಳೂರಿನ ಕರ್ನಾಟಕ ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ 2013ರ ಆ. 5ರಂದು ಪ್ರಕರಣ ದಾಖಲಾಗಿತ್ತು.

Ad Widget

ಪ್ರಕರಣದ ವಿಚಾರಣೆಯನ್ನು ನಡೆಸಿದ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಅಪರಾಧಿಗೆ ಕಲಂ 13(1) (ಇ) ಮತ್ತು 13(2) ಲಂಚ ನಿರೋಧ ಕಾಯ್ದೆ 1988ರಡಿ 5 ವರ್ಷಗಳ ಕಾಲ ಸಾದಾ ಸಜೆ ಹಾಗೂ 1.30 ಕೋ.ರೂ. ದಂಡ, ದಂಡ ಕಟ್ಟಲು ವಿಫ‌ಲನಾದರೆ ಹೆಚ್ಚುವರಿ 6 ತಿಂಗಳ ಸಾದಾ ಸಜೆ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.

Leave a Comment

Your email address will not be published. Required fields are marked *