Ad Widget .

ಮಂಡ್ಯದ ಮಾಜಿ ಶಾಸಕ ಕೆ.ಕೆಂಪೇಗೌಡ ನಿಧನ

ಮಂಡ್ಯ: ಪಾಂಡವಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಕೆಂಪೇಗೌಡ(96) ಅವರು ಬುಧವಾರ ಕೊನೆಯುಸಿರೆಳೆದಿದ್ದಾರೆ.

Ad Widget . Ad Widget .

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬುಧವಾರ ಸಾವನ್ನಪ್ಪಿದರು. ಅವರಿಗೆ 96 ವರ್ಷ ವಯಸ್ಸಾಗಿತ್ತು.

Ad Widget . Ad Widget .

ಇಂದು ಮಧ್ಯಾಹ್ನ 3 ರಿಂದ 4 ಗಂಟೆಯೊಳಗೆ ಸ್ವಗ್ರಾಮ ಪಾಂಡವಪುರ ತಾಲೂಕು ಚಿನಕುರಳಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತರು ನಾಲ್ವರು ಪುತ್ರರು, ಐದು ಮಂದಿ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಕೆಂಪೇಗೌಡ ಅವರು ಮೂರು ಬಾರಿ ಶಾಸಕರಾಗಿ ಜನಮನ್ನಣೆ ಗಳಿಸಿದ್ದರು. ತಾಲೂಕು ಬೋರ್ಡ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

Leave a Comment

Your email address will not be published. Required fields are marked *