Ad Widget .

ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ; ಸ್ಥಳದಲ್ಲೇ ಮಹಿಳೆ ಮೃತ್ಯು

ಸಮಗ್ರ ನ್ಯೂಸ್ : ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅಂಬಾಗಿಲು ಅಮೃತ ಗಾರ್ಡನ್ ಸಭಾಂಗಣದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬುಧವಾರ ಮಧ್ಯಾಹ್ನ ನಡೆದಿದೆ.

Ad Widget . Ad Widget .

ಹೆಬ್ರಿ ಮೂರಕೈ ನಿವಾಸಿ ವಸಂತಿ ಶೆಟ್ಟಿ(65) ಮೃತ ದುರ್ದೈವಿಯಾಗಿದ್ದಾರೆ.

Ad Widget . Ad Widget .

ಕುಂದಾಪುರದಿಂದ ಉಡುಪಿ ಕಡೆಗೆ ಬರುತ್ತಿದ್ದ ಬಸ್, ರಸ್ತೆ ದಾಟುತ್ತಿದ್ದ ವಸಂತಿ ಶೆಟ್ಟಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *