ದ.ಕ ಜಿಲ್ಲೆಯಲ್ಲಿ ಮರಳುಗಾರಿಕೆ ನಿಷೇಧ| ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಸಿಆರ್‌ಝೆಡ್‌ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧಿಸಿ ಹಸಿರು ಪೀಠ ಆದೇಶವಿದೆ. ಇದೇ ಆಧಾರ ಮೇಲೆ ದ.ಕ. ಜಿಲ್ಲೆಯಲ್ಲೂ ಸಿಆರ್‌ಝೆಡ್‌ನಲ್ಲೂ ಮರಳುಗಾರಿಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಇದೀಗ ತಡೆ ನೀಡುವಂತೆ ಮರಳುಗಾರರು ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದು, ಹೈಕೋರ್ಟ್‌ ಜಿಲ್ಲಾಧಿಕಾರಿ ಆದೇಶಕ್ಕೆ ತಡೆ ನೀಡಿದೆ.

Ad Widget ... ..

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಷೇಧ ಮಾಡುವಂತೆ ಮೇ 22 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ. ರಾಜೇಂದ್ರ ಆದೇಶ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೂಡಲೇ ನದಿ ತಟದಲ್ಲಿರುವ ದೋಣಿ, ಮರಳು ಸಾಗಾಣಿಕೆಗೆ ಬಳಸುವ ವಾಹನಗಳನ್ನು ತೆರವುಗೊಳಿಸುವಂತೆ ಆದೇಶಿಸಲಾಗಿತ್ತು. ಅದೀಗ ಅಸಿಂಧುಗೊಂಡಿದೆ.

Ad Widget

ಸಿಆರ್‌ಝೆಡ್‌ ಮರಳುಗಾರಿಕೆಗೆ ನಿಷೇಧಿಸಿ ಸುಪ್ರೀಂ ಕೋರ್ಟ್‌ ರಾಷ್ಟ್ರೀಯ ಹಸಿರು ಪೀಠ ಆದೇಶದ ವಿರುದ್ಧ ಸಾಂಪ್ರದಾಯಿಕ ಮರಳುಗಾರರು ಸುಪ್ರೀಂಕೋರ್ಟ್‌ಗೆ ದಾವೆ ಸಲ್ಲಿಸಿದ್ದಾರೆ. ಮರಳುಗಾರರ ಪರವಾಗಿ ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲ ದೇವದತ್‌ ಕಾಮತ್‌ ವಾದಿಸಲಿದ್ದಾರೆ.

ಕರಾವಳಿ ಜಿಲ್ಲೆಯಲ್ಲಿ ಸುಮಾರು 5 ದಶಕಗಳಿಂದ ಮರಳುಗಾರಿಕೆ ನಡೆಸಲಾಗುತ್ತಿದ್ದು, ಇದನ್ನೇ ನಂಬಿಕೊಂಡು ಸಹಸ್ರಾರು ಮಂದಿ ಬದುಕುತ್ತಿದ್ದಾರೆ. ಸಿಆರ್‌ಝೆಡ್‌ ಮರಳುಗಾರಿಕೆ ನಡೆಸದಿದ್ದಲ್ಲಿ ಅಳಿವೆಬಾಗಿಲು ಸುತ್ತಮತ್ತ ಮರಳು ರಾಶಿ ಬಿದ್ದು ಮೀನುಗಾರಿಕೆಗೆ ತೊಂದರೆಯಾಗಲಿದೆ. ನದಿಯಲ್ಲಿ ಮರಳು ತುಂಬಿ ನಗರ ಭಾಗದಲ್ಲಿ ಕೃತಕ ನೆರೆ ಮತ್ತಷ್ಟು ಹೆಚ್ಚಳವಾಗಲಿದೆ. ಅಕ್ರಮ ಮರಳುಗಾರಿಕೆ ನಿಯಂತ್ರಣವಾಗಿ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಮರಳು ಸಿಗಬೇಕಾದರೆ ಮರಳುಗಾರಿಕೆ ಅನುಮತಿ ನೀಡಬೇಕಾಗಿದೆ.

ಉಡುಪಿಯಲ್ಲಿ ಅಕ್ರಮ ಮರಳುಗಾರಿಕೆ ನಿಷೇಧಿಸಿ ಎನ್‌ಜಿಟಿ ಆದೇಶ ಮಾಡಿದ್ದು, ಅದು ದಕ್ಷಿಣ ಕನ್ನಡ, ಉತ್ತರ ಕನ್ನಡಕ್ಕೆ ಅನ್ವಯವಾಗುವುದಿಲ್ಲ. ಅಕ್ರಮ ಮರಳುಗಾರಿಕೆಯನ್ನು ತಡೆಯಲಿ, ಆದೇಶ ಸಾಂಪ್ರದಾಯಿಕವಾಗಿ ಮರಳುಗಾರಿಕೆ ನಡೆಸುವವರಿಗೆ ನ್ಯಾಯಾಲಯ ಅವಕಾಶ ಮಾಡಿಕೊಂಡಬೇಕೆಂದು ಸುಪ್ರೀಂ ಕೋರ್ಟ್‌ ಮುಂದೆ ಅಹವಾಲು ಇರಿಸಲಾಗುವುದು ಎಂದು ಮರಳು ಕ್ರಿಯಾ ಸಮಿತಿ ಮಾಜಿ ಅಧ್ಯಕ್ಷ ಮಯೂರ್‌ ಉಲ್ಲಾಳ್‌ ತಿಳಿಸಿದ್ದಾರೆ.

Leave a Comment

Your email address will not be published. Required fields are marked *