ತಿರಂಗಾದಿಂದ ಸ್ಕೂಟರ್ ಒರೆಸಿ ಅಗೌರವ; ವಿಡಿಯೋ ವೈರಲ್

ಸಮಗ್ರ ನ್ಯೂಸ್: ರಾಷ್ಟ್ರಧ್ವಜವನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯ. ಇದನ್ನು ಬಾಲ್ಯದಿಂದಲೇ ಕಲಿಸಲಾಗುತ್ತದೆ. ತ್ರಿವರ್ಣ ಧ್ವಜಕ್ಕೆ ಯಾವುದೇ ಅಗೌರವ ಅಥವಾ ತಿರಸ್ಕಾರ ತೋರಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಯಾಗಬಹುದು.

Ad Widget ... .. Ad Widget .

ಈಶಾನ್ಯ ದೆಹಲಿಯ ಭಜನ್ಪುರ ಪ್ರದೇಶದಲ್ಲಿ 52 ವರ್ಷದ ವ್ಯಕ್ತಿಯೊಬ್ಬ ರಾಷ್ಟ್ರಧ್ವಜಕ್ಕೆ ಅಗೌರವ ತೋರುವ ರೀತಿಯಲ್ಲಿ ವರ್ತಿಸಿದ್ದಾನೆ.

Ad Widget

ತನ್ನ ದ್ವಿಚಕ್ರ ವಾಹನವನ್ನು ಸ್ವಚ್ಛಗೊಳಿಸಲು ಈತ ರಾಷ್ಟ್ರಧ್ವಜವನ್ನು ಬಳಸಿದ್ದಾನೆ. ಈ ವ್ಯಕ್ತಿ ಉತ್ತರ ಘೋಂಡಾ ಪ್ರದೇಶದ ನಿವಾಸಿ. ವ್ಯಕ್ತಿ ಮಡಚಿಟ್ಟಿದ್ದ ಧ್ವಜದಿಂದ ತನ್ನ ಬಿಳಿ ಸ್ಕೂಟರ್ ಅನ್ನು ಸ್ವಚ್ಛಗೊಳಿಸುವ ಮತ್ತು ಧೂಳು ಹೊಡೆಯುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ದೃಶ್ಯವನ್ನು ಚಿತ್ರೀಕರಿಸಿದ ಸ್ಥಳೀಯರು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದರು. ನಂತರ ಈ ವಿಚಾರ ಬೆಳಕಿಗೆ ಬಂದಿದ್ದು, ಆತನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Leave a Comment

Your email address will not be published. Required fields are marked *