ಸಮಗ್ರ ನ್ಯೂಸ್: ಮದ್ರಸದಿಂದ ಮನೆಗೆ ಹಿಂತಿರುಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಸುಳ್ಯ ಸಮೀಪದ ಅರಂಬೂರು ಬಳಿ ನಡೆದಿದೆ.
ಇಲ್ಲಿನ ಪಾಲಡ್ಕದ ರಶೀದ್ ಎಂಬವರ ಪುತ್ರಿ ರಿಫಾ (7 ವರ್ಷ) ಇಂದು ಬೆಳಿಗ್ಗೆ 8.45ರ ಸುಮಾರಿಗೆ ಅರಂಬೂರು ಮದ್ರಸಾದಿಂದ ಹಿಂತಿರುಗಿ ಪಾಲಡ್ಕದಲ್ಲಿ ಮನೆ ಕಡೆಗೆ ಹೋಗಲು ರಸ್ತೆ ದಾಟುತ್ತಿದ್ದಾಗ ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತದ್ದ ಬೈಕೊಂಡು ಡಿಕ್ಕಿ ಹೊಡೆಯಿತು.

ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಬದುಕಿಸಿಕೊಳ್ಳಲಾಗಲಿಲ್ಲವೆಂದು ತಿಳಿದು ಬಂದಿದೆ. ಸುಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.