Ad Widget .

ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ರವರ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರದಿಂದ ಉದ್ದೇಶಿಸಲಾಗಿದ್ದು, ರಾಜ್ಯ ಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Ad Widget . Ad Widget .

2022ರ ಅಕ್ಟೋಬರ್ 09 ರಂದು ರಾಜ್ಯ ಸರ್ಕಾರದ ವತಿಯಿಂದ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ.

Ad Widget . Ad Widget .

ಅರ್ಹ ವ್ಯಕ್ತಿಗಳು, ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 17ರ ಒಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಇಲ್ಲಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 205, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಸಂಖ್ಯೆ: 080-29787448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *