Ad Widget .

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ – ಸಿ ಎಂ ಬೊಮ್ಮಾಯಿ ಘೋಷಣೆ

ಸಮಗ್ರ ನ್ಯೂಸ್: ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದ.ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ತಿಳಿಸಿದ್ದಾರೆ

Ad Widget . Ad Widget .

ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಈ ಮೂಲಕ ಮುಂಬರುವ ವಿಧಾನಸಭಾ ಚುಣಾವಣೆ ತಯಾರಿ ನಡೆಸಿದೆ.

Ad Widget . Ad Widget .

ಸುಮಾರು 40 ಎಕರೆ ವಿಸ್ತೀರ್ಣದಲ್ಲಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದ್ದು, 3 ಲಕ್ಷ ಜನರಿಗೆ ಊಟದ ವ್ಯವಸ್ಥೆ, ಸುಮಾರು 200 ಎಕರೆ ಪ್ರದೇಶದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ, ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ 5 ಸಾವಿರ ಬಸ್​ಗಳ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ಮುಂಡರು, ಶಾಸಕರು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿ ಹಲವು ಗಣ್ಯರು ಭಾಗಿಯಾಗಿದ್ದಾರೆ.

ಇದೇ ವೇಳೆ ವೇದಿಕೆ ಮೇಲೆ ಭಾಷಣ ಮಾಡಿದ ಸಿಎಂ, ದಾಖಲೆಯ ಸಂಖ್ಯೆಯಲ್ಲಿ ಸೇರಿದ್ದಕ್ಕೆ ನಿಮಗೆ ಅಭಿನಂದನೆ. ಇಲ್ಲಿಂದ ಇಡೀ ರಾಜ್ಯಕ್ಕೆ ಕೇಳಿಸುವಂತೆ ಸಂದೇಶ ನೀಡಿದ್ದೇವೆ. ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂಬ ಸಂದೇಶ ರವಾನೆ ಆಗಿದೆ. ನೀವು ಇಟ್ಟಿರುವ ವಿಶ್ವಾಸಕ್ಕೆ ನಾವು ದ್ರೋಹ ಮಾಡಲ್ಲ. 2019ರಲ್ಲೇ ಬಿ.ಎಸ್​.ಯಡಿಯೂರಪ್ಪ ಸಿಎಂ ಆಗಬೇಕಿತ್ತು. ಆದರೆ ಕಾಂಗ್ರೆಸ್​ನ ಹುನ್ನಾರದಿಂದ ಅದು ಕೈತಪ್ಪಿತ್ತು. ಕಾಂಗ್ರೆಸ್​ನಿಂದ ಬಂದ ಎಲ್ಲ ಶಾಸಕರೂ ವೀರರು ಎಂದು ಸಿಎಂ ಬೊಮ್ಮಾಯಿ ಹೇಳಿದರು.

Leave a Comment

Your email address will not be published. Required fields are marked *