ಇದು 40% ಕಮಿಷನ್ ಸಮಾವೇಶ – ರಾಜ್ಯ ಸರ್ಕಾರಕ್ಕೆ ಕುಟುಕಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಬಿಜೆಪಿಗರು 40% ಕಮಿಷನ್‌ ಲೂಟಿಯ ಹಣದಲ್ಲಿ ʼಕಮಿಷನ್‌ ಸಮಾವೇಶʼ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಕಮಲಪಾಳಯದ ವಿರುದ್ಧ ಗುಡುಗಿದೆ.

Ad Widget ... ..

ಈ ಕುರಿತು ಸರಣಿ ಟ್ಟೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮಾವೇಶವಲ್ಲ “ಕಮಿಷನ್ ಸಮಾವೇಶ” 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ?. ನಿಮ್ಮದೇ ಪಕ್ಷದ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್‌ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ? ಎಂದು ಪ್ರಶ್ನಿಸಿದೆ.

Ad Widget

ಅಲ್ಲದೆ, ಗುತ್ತಿಗೆದಾರರು ಸರ್ಕಾರದ ಕಮಿಷನ್ ಕಿರುಕುಳದ ಬಗ್ಗೆ ಪ್ರಧಾನಿಗೆ ಪತ್ರ ಬರೆದರೂ ಪ್ರಯೋಜನವಿಲ್ಲ, ಪತ್ರಿಕಾಗೋಷ್ಠಿ ನಡೆಸಿದರೂ ಉಪಯೋಗವಿಲ್ಲ, 40% ಕಮಿಷನ್ ಲೂಟಿ ನಿಂತೇ ಇಲ್ಲ. ಭ್ರಷ್ಟಾಚಾರವನ್ನೇ ಉಸಿರಾಡುತ್ತಿರುವ ನಿಮ್ಮ ಸರ್ಕಾರದ ಸಾಧನೆ ಏನು..? ಅಕ್ರಮಗಳನ್ನು ಮುಚ್ಚಿಕೊಳ್ಳುವುದೇ ಸಾಧನೆಯೇ..? ಸರ್ಕಾರ ಪರ್ಸೆಂಟೇಜ್ ಮೇಲೆ ನಡೆಯುತ್ತಿದೆಯೇ? ಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿದೆ. ಸಿಎಂ ಬೊಮ್ಮಾಯಿ ಅವರೇ ʼಬಿಜೆಪಿ ಬ್ರಷ್ಟೋತ್ಸವʼದ ಇಂತಹ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ? ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದು ಎಂದು ಕಿಡಿಕಾರಿದೆ.

Leave a Comment

Your email address will not be published. Required fields are marked *