Ad Widget .

ಇಂದು ರಾಜ್ಯ ಸರ್ಕಾರದ ಜನಸ್ಪಂದನಾ ಸಮಾವೇಶ| ಸಾಧನೆಗಳ ಜೊತೆಗೆ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ಸಮಾವೇಶ ಜನಸ್ಪಂದನಾ ಸಮಾವೇಶವು ಇಂದು(ಸೆ.10) ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

Ad Widget . Ad Widget .

ಜನಸ್ಪಂದನ ಸಾರ್ಥಕ ಸೇವೆ ಸಬಲೀಕರಣ ಸಮಾವೇಶ ಇಂದು ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಎಂ.ಟಿ.ಬಿ ನಾಗರಾಜ್, ಮುನಿರತ್ನ ಸೇರಿದಂತೆ ಹಲವು ಸಚಿವರು, ಹಿರಿಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಿದ್ದಾರೆ.

Ad Widget . Ad Widget .

ಇಂದು ನಡೆಯಲಿರುವ ಮೊದಲ ಜನಸ್ಪಂದನ ಸಮಾವೇಶದಲ್ಲಿ ಪಕ್ಷದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಪಾಲ್ಗೊಳ್ಳುತ್ತಿದ್ದಾರೆ. ಮುಂದಿನ ಜನಸ್ಪಂದನ ಸಮಾವೇಶದಲ್ಲಿ ಕೇಂದ್ರದ ಹಿರಿಯ ನಾಯಕರು ಭಾಗವಹಿಸುವ ಸಾಧ್ಯತೆ ಇದೆ.

ಜನಸ್ಪಂದನ ಸಮಾವೇಶಕ್ಕೆ ಜನರನ್ನು ಕರೆತರಲು ಸುಮಾರು 5 ಸಾವಿರ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು 200 ಎಕರೆ ಜಾಗವನ್ನು ಸಮಾವೇಶಕ್ಕೆ ಬರುವ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. 40 ಎಕರೆಯಲ್ಲಿ ಸಮಾವೇಶ ನಡೆಯಲಿದ್ದು, 2,300 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

Leave a Comment

Your email address will not be published. Required fields are marked *