Ad Widget .

ಗಣಪತಿ ಮೆರವಣಿಗೆ ವೇಳೆ ಇತ್ತಂಡಗಳ ನಡುವೆ ಮಾರಾಮಾರಿ| ಯುವಕನ ಬರ್ಬರ ಕೊಲೆ

ಗಣಪತಿ ಮೆರವಣಿಗೆ ವೇಳೆ ಇತ್ತಂಡಗಳ ನಡುವೆ ಮಾರಾಮಾರಿ| ಯುವಕನ ಬರ್ಬರ ಕೊಲೆ

Ad Widget . Ad Widget .

ಸಮಗ್ರ ನ್ಯೂಸ್: ಗಣಪತಿ ಮೆರವಣಿಗೆಯಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ ನಡೆದಿದ್ದು, ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಈ ದುರಂತ ಘಟನೆ ನಡೆದಿದೆ.

Ad Widget . Ad Widget .

ಗಣಪತಿ ವಿಸರ್ಜನೆ ವೇಳೆ ಚಾಕುವಿನಿಂದ ಇರಿದು ಅರ್ಜುನ ಗೌಡ ಪಾಟೀಲ(20) ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಅರ್ಜುನಗೌಡ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Leave a Comment

Your email address will not be published. Required fields are marked *