ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಅವರ ಚಿಕ್ಕಪ್ಪ ,ನಟ ಕೃಷ್ಣಂ ರಾಜು ನಿಧನ

ಸಮಗ್ರ ನ್ಯೂಸ್: ‘ಬಾಹುಬಲಿ’ ಖ್ಯಾತಿಯ ನಟ ಪ್ರಭಾಸ್ ಅವರ ಚಿಕ್ಕಪ್ಪ, ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣಂ ರಾಜು ಅವರು ಇಂದು (ಭಾನುವಾರ) ಮುಂಜಾನೆ ನಿಧನರಾಗಿದ್ದಾರೆ.

Ad Widget ... ..

ಕೃಷ್ಣಂ ರಾಜು ಅವರಿಗೆ 83 ವರ್ಷ ವಯಸ್ಸಾಗಿದ್ದು,

Ad Widget

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 3.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಕೃಷ್ಣಂ ರಾಜು ಅವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇಂದು ಸಂಜೆ ವೇಳೆಗೆ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *