ನಾಲಿಗೆ ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ

ಸಮಗ್ರ ನ್ಯೂಸ್: ಭಕ್ತನೊಬ್ಬ ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆಯೊಂದು ಇಲ್ಲಿನ ಶೀಟ್ಲಾ ದೇವಸ್ಥಾನದಲ್ಲಿ ನಡೆದಿದೆ. ಕೌಶಂಬಿ ನಿವಾಸಿ ಸಂಪತ್ (38) ದೇವರಿಗೆ ನಾಲಿಗೆ ಅರ್ಪಿಸಿದ ಭಕ್ತ.

. Ad Widget . Ad Widget

ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

. Ad Widget . . Ad Widget . Ad Widget

ಸಂಪತ್ ತನ್ನ ಪತ್ನಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದರು. ಗಂಗಾ ನದಿಯಲ್ಲಿ ಸ್ನಾನ ಮಾಡಿದ ನಂತರ ಪೂಜೆ ಸಲ್ಲಿಸಿದರು. ದೇವಾಲಯ ಪ್ರದಕ್ಷಿಣೆ ಮುಗಿಸಿದ ನಂತರ, ಅವನು ತನ್ನ ನಾಲಿಗೆಯನ್ನು ಬ್ಲೇಡ್‌ನಿಂದ ಕತ್ತರಿಸಿ ದೇವರಿಗೆ ಅರ್ಪಿಸಿದ್ದಾನೆ ಎಂದು ಕರ್ಹಾ ಧಾಮ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಅಭಿಲಾಷ್ ತಿವಾರಿ ತಿಳಿಸಿದ್ದಾರೆ.

ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡುವ ಇಚ್ಛೆಯನ್ನು ಪತಿ ವ್ಯಕ್ತಪಡಿಸಿದ್ದರು ಎಂದು ಆತನ ಪತ್ನಿ ಬನ್ನೋ ದೇವಿ ಹೇಳಿದ್ದಾರೆ.

Leave a Comment

Your email address will not be published. Required fields are marked *