Ad Widget .

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ಮತ್ತೆ ಭಾರೀ ಮಳೆ ಸಾಧ್ಯತೆ; ಪ್ರವಾಹ ಭೀತಿಯಲ್ಲಿ ಹಲವು ರಾಜ್ಯಗಳು!!

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಹಲವು ರಾಜ್ಯಗಳಲ್ಲಿ ಮತ್ತೆ ಪ್ರವಾಹ ಭೀತಿಯನ್ನು ಉಂಟುಮಾಡಿದೆ.

Ad Widget . Ad Widget .

ಶನಿವಾರದಿಂದಲೇ ಒಡಿಶಾ, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್‌ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಧಾರಾಕಾರ ಮಳೆ ಆರಂಭವಾಗಿದ್ದು, ಇನ್ನೂ 5 ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಮಳೆ, ಪ್ರವಾಹ, ಭೂಕುಸಿತದಂತಹ ದುರಂತಗಳಿಂದ ಕಂಗಾಲಾಗಿದ್ದ ಜನರನ್ನು ಮತ್ತೆ ಆತಂಕಕ್ಕೆ ನೂಕಿದೆ.

Ad Widget . Ad Widget .

ಒಡಿಶಾದಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭುವನೇಶ್ವರ ಮತ್ತು ಕಟಕ್‌ನಲ್ಲಿ ವಿಪರೀತ ಮಳೆಯಾಗಲಿದ್ದು, ಮನೆಗಳಿಂದ ಹೊರಗೆ ಬರದಂತೆ ನಾಗರಿಕರಿಗೆ ಸೂಚಿಸಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ಆಂಧ್ರಪ್ರದೇಶ, ಪಶ್ಚಿಮ ಬಂಗಾಲ, ತೆಲಂಗಾಣ ಮತ್ತು ಗುಜರಾತ್‌ನಲ್ಲೂ ಇದೇ ಸ್ಥಿತಿಯಿದ್ದು, ಸೆ.14 ರವರೆಗೂ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಪುದು ಚೇರಿ ಮತ್ತು ಕರೈಕಲ್‌ನಲ್ಲಿ ರವಿ ವಾರ ವರುಣ ಅಬ್ಬರಿಸಿದ್ದು, ಕರ್ನಾಟಕ ಮತ್ತು ಕೇರಳದಲ್ಲಿ ಸೆ. 12ರಂದು ಭಾರೀ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಹೇಳಿದೆ.

ದಿಲ್ಲಿಯಲ್ಲಿ ಶನಿವಾರದಿಂದೀಚೆಗೆ ಅಲ್ಪ ಪ್ರಮಾಣದಲ್ಲಿ ಮಳೆಯಾಗಿದೆ. ಸೆ.17- 18ರಂದು ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ವೊಂದು ಸಕ್ರಿಯಗೊಳ್ಳುವ ಸಾಧ್ಯತೆ ಯಿದೆ ಎಂದೂ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *