ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕ

ಬೆಂಗಳೂರು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ ( ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

Ad Widget ... ..

ಈ ಬಗ್ಗೆ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ ಬಲಪಡಿಸಲು ಮುಂದಾಗುವಂತೆ ಎಐಸಿಸಿ ಆದೇಶದಲ್ಲಿ ಸೂಚಿಸಲಾಗಿದೆ.

Ad Widget

ಇಷ್ಟು ವರ್ಷಗಳ ಕಾಲ ಜೆಡಿಎಸ್ ನಲ್ಲಿ ಇದ್ದ ಮಧು ಬಂಗಾರಪ್ಪ ಕಳೆದ ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿಯವರಿಂದ‌ ಅಂತರ ಕಾಯ್ದುಕೊಂಡಿದ್ದರು‌. ಆ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಗೆ ಕರೆ ತಂದಿದ್ದರು. ಆದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಮಧು ಬಂಗಾರಪ್ಪ ಬೇಸರಗೊಂಡಿದ್ದರು.

ಈ ಹಿನ್ನೆಲೆ ವರಿಷ್ಠರ ಜೊತೆಗೆ ಖುದ್ದು ಮಾತನಾಡಿದ ಡಿ.ಕೆ.ಶಿವಕುಮಾರ್ ಓಬಿಸಿ ಅಧ್ಯಕ್ಷ ಸ್ಥಾನ ಲಭಿಸುವಂತೆ ನೋಡಿಕೊಂಡಿದ್ದಾರೆ. ಸಮುದಾಯಕ್ಕೆ ಸೇರಿರುವ ಮಧು ಬಂಗಾಪ್ಪ ಹಿಂದುಳಿದ ವರ್ಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ.

Leave a Comment

Your email address will not be published. Required fields are marked *