Ad Widget .

ಕ್ರಿಕೆಟ್ ಗೆ ಗುಡ್ ಬೈ ಹೇಳಿದ ರಾಬಿನ್ ಉತ್ತಪ್ಪ

ಸಮಗ್ರ ನ್ಯೂಸ್: ರಾಬಿನ್ ಉತ್ತಪ್ಪ ಅವರು ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ಬುಧವಾರ ನಿವೃತ್ತಿ ಘೋಷಿಸಿದ್ದಾರೆ. ಭಾರತದ ಕ್ರಿಕೆಟ್ ಮಾಜಿ ತಾರೆ ರಾಬಿನ್ ಉತ್ತಪ್ಪ ನಿವೃತ್ತಿ ಬಗ್ಗೆ ಟ್ವಿಟರ್‌ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Ad Widget . Ad Widget .

ನನ್ನ ದೇಶ ಮತ್ತು ನನ್ನ ರಾಜ್ಯ ಕರ್ನಾಟಕವನ್ನು ಪ್ರತಿನಿಧಿಸುವುದು ನನ್ನ ದೊಡ್ಡ ಗೌರವ. ಹೇಗಾದರೂ, ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು ಮತ್ತು ಕೃತಜ್ಞತೆಯ ಹೃದಯದಿಂದ, ನಾನು ಭಾರತೀಯ ಕ್ರಿಕೆಟ್‌ನ ಎಲ್ಲಾ ಪ್ರಕಾರಗಳಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Ad Widget . Ad Widget .

205 ಐಪಿಎಲ್ ಪಂದ್ಯಗಳನ್ನು ಆಡಿರುವ ರಾಬಿನ್ ಉತ್ತಪ್ಪ 4952 ರನ್ ಗಳಿಸಿದ್ದಾರೆ. 27 ಅರ್ಧಶತಕ ಸಿಡಿಸಿದ್ದಾರೆ. 46 ಏಕದಿನ ಪಂದ್ಯಗಳು, 13 ಟಿ20 ಪಂದ್ಯಗಳಲ್ಲಿ ಭಾರತ ತಂಡ ಪ್ರತಿನಿಧಿಸಿದ್ದಾರೆ. 2006 ಏಪ್ರಿಲ್ 15ರಂದು ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಅವರು ಪಾದಾರ್ಪಣೆ ಮಾಡಿದ್ದರು.

Leave a Comment

Your email address will not be published. Required fields are marked *