Ad Widget .

ಮಂಗಳೂರು: ಟ್ರೋಲ್ ಆಗುತ್ತಿದ್ದಂತೆ ರಾತ್ರೋರಾತ್ರಿ ಗುಂಡಿ ಮುಚ್ಚಿದ ಹೆದ್ದಾರಿ ಪ್ರಾಧಿಕಾರ| ಈ ಡಾಂಬರಿಗಿಂತ ರೊಟ್ಟಿಗೆ ಕಲಸಿದ ರಾಗಿ ಹಿಟ್ಟೇ ಸ್ಟ್ರಾಂಗು ಎಂದ ಕಾಂಗ್ರೆಸ್

ಸಮಗ್ರ ನ್ಯೂಸ್: ಪ್ರಧಾನಮಂತ್ರಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಂಗಳೂರು ನಗರ ಮದುವಣಗಿತ್ತಿಯಂತೇ ಸಿಂಗಾರಗೊಂಡಿತ್ತು. ನಗರದ ರಾಜಮಾರ್ಗಗಳು ಮರು ಡಾಂಬರೀಕರಣಗೊಂಡು ಅಂದವಾಗಿತ್ತು. ಆದರೆ ಪ್ರಧಾನಿ ಬಂದು ಹೋದ ಹತ್ತೇ ದಿನದಲ್ಲಿ ರಸ್ತೆಯಲ್ಲಿ ಹೊಂಡ‌ ಬಿದ್ದಿದೆ.

Ad Widget . Ad Widget .

ಆದರೆ ರಸ್ತೆ ಹೊಂಡ ಬಿದ್ದಿರುವ ಚಿತ್ರಗಳು ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರಾತ್ರೋ ರಾತ್ರಿ ಹೊಂಡವನ್ನು ಮುಚ್ಚಿ ತೇಪೆ ಕಾರ್ಯ ಮಾಡಿದೆ. ಮಂಗಳೂರು ನಗರ ಹೊರವಲಯದ ಕುಳೂರಿನ ಸೇತುವೆ ಮಳೆಗಾಲದ ಅವಧಿಯಲ್ಲಿ ಸಂಪೂರ್ಣ ಹೊಂಡ-ಗುಂಡಿಗಳಿಂದ ತುಂಬಿ ಹೋಗಿತ್ತು. ಪ್ರತಿದಿನ ಘನ ವಾಹನಗಳು ಸೇರಿದಂತೆ ಸಾವಿರಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಜನ ಪಡಬಾರದ ಕಷ್ಟವನ್ನು ಅನುಭವಿಸಿ ಪ್ರಯಾಣ ಮಾಡುತ್ತಿದ್ದರು.

Ad Widget . Ad Widget .

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದರಿನಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೆಪ್ಟೆಂಬರ್ 2 ರಂದು ನಗರಕ್ಕೆ ಭೇಟಿ ನೀಡಿದ್ದರು. ಮೋದಿ ಬರುವ ಹಿನ್ನಲೆ ಕುಳೂರು ಸೇತುವೆಯ ರಸ್ತೆಗೆ ಮರು ಡಾಂಬಾರೀಕರಣ ಮಾಡಲಾಗಿತ್ತು. ಬಂಗ್ರಕೂಳೂರಿನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲು ಮೋದಿ ಅವರು ನವಮಂಗಳೂರು ಬಂದರಿನಿಂದ ರಸ್ತೆ ಮಾರ್ಗವಾಗಿ ಸಾಗುವ ರಸ್ತೆಯಲ್ಲಿದ್ದ ಗುಂಡಿಗಳನ್ನು ಎರಡು ದಿನಗಳಿಗೆ ಮುಂಚಿತವಾಗಿ ಮುಚ್ಚಿ, ತರಾತುರಿಯಲ್ಲಿ ಡಾಂಬರೀಕರಣ ಮಾಡಲಾಗಿತ್ತು.

40% ಕಮಿಷನ್ ಇನ್ನೇನು ಸಾಕ್ಷಿ ಬೇಕು:
ಪ್ರಧಾನಿ ಮೋದಿಯನ್ನು ಪ್ರತಿ ತಿಂಗಳು ಕರೆಸುತ್ತೇವೆ ಎನ್ನುವ ಬಿಜೆಪಿ ಸರಕಾರಕ್ಕೆ ತೇಪೆ ಕಾರ್ಯವನ್ನು ಕಾಂಗ್ರೆಸ್‌ ಪಕ್ಷ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿದೆ. ” ನಿಮ್ಮ ಸರಕಾರದ 40% ಕಮಿಷನ್ ಲೂಟಿಗೆ ಇನ್ನು ಯಾವ ಸಾಕ್ಷಿ ಬೇಕು ಬೊಮ್ಮಾಯಿ ಅವರೇ, ಇದೇ ರಸ್ತೆಯ ಮೇಲೆ ಬಂದು ” ಡಬಲ್ ಇಂಜಿನ್‌ ಅಭಿವೃದ್ಧಿಯಾಗುತ್ತದೆ” ಎಂದು ಭಾಷಣ ಮಾಡಿದ್ದ ನರೇಂದ್ರ ಮೋದಿಯವರೇ , ಈ ಲೂಟಿ ತನಿಖೆಗೆ ಅರ್ಹವಲ್ಲವೇ? ಬಿಜೆಪಿ ಸರಕಾರದ ರಸ್ತೆ ಡಾಂಬರಿಗಿಂತ ಅಡುಗೆ ಮನೆಯಲ್ಲಿ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್‌ ಎಂದು ಟೀಕಿಸಿದೆ.

Leave a Comment

Your email address will not be published. Required fields are marked *