ಸಿಎಂ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ನೇಮಕ

ಸಮಗ್ರ ನ್ಯೂಸ್: ಇತ್ತೀಚಿಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಅಕಾಲಿಕವಾಗಿ ನಿಧನದ ಕಾರಣದಿಂದ ತೆರವಾಗಿದ್ದ ಸ್ಥಾನಕ್ಕೆ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಸಿಎಂ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ.

Ad Widget ... ..

ಸಿಎಂ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಶಂಕರ್ ಪಾಗೋಜಿ ಅವರನ್ನು ಮುಖ್ಯಮಂತ್ರಿಯವರ ಪದಾವಧಿವರೆಗೆ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಯವರ ಮಾಧ್ಯಮ ಸಂಯೋಜಕರನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *