Ad Widget .

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.

Ad Widget . Ad Widget .

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಹೇಳಿದ್ದಾರೆ.

Ad Widget . Ad Widget .

ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯರ ಗೈರು ಹಾಜರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆಗಿದ್ದರು. ಅಲ್ಲದೇ ಸದಸ್ಯರ ಗೈರಿಗೆ ಅಸಮಾಧಾನ ವ್ಯಕ್ತ ಪಡಿಸಿದ್ದರು. ಈ ಬೆನ್ನಲ್ಲೇ ಸಚಿವ ಸುಧಾಕರ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *