Ad Widget .

ಕರಾವಳಿ ಜಿಲ್ಲೆಗಳಲ್ಲಿ ಕುಚಲಕ್ಕಿ ವಿತರಣೆಗೆ ರಾಜ್ಯಸರ್ಕಾರ ಸಮ್ಮತಿ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಜನರ ಪ್ರಮುಖ ಆಹಾರವಾಗಿರುವ ಕುಚಲಕ್ಕಿಯನ್ನು ಗುಣಮಟ್ಟದಲ್ಲಿ ಪಡಿತರದಾರರಿಗೆ ವಿತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮತಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾಣಾ ಹಾಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ ಅವರು ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಅವರು ನಿಯೋಗದ ಪ್ರಸ್ತಾವನೆಗೆ ಸಮ್ಮತಿಸಿ ಪ್ರಸ್ತಾವನೆಯಂತೆ ಕರಾವಳಿ ಜಿಲ್ಲೆಗಳ ಪಡಿತರದಾರರಿಗೆ ಗುಣಮಟ್ಟದ ಕುಚಲಕ್ಕಿ ವಿತರಣೆಗೆ ಕ್ರಮ ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಪ್ಪಿರುವುದಾಗಿ ರಾಜ್ಯಾಧ್ಯಕ್ಷರಾದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

Ad Widget . Ad Widget . Ad Widget .

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪಡಿತರ ಚೀಟಿದಾರರಿಗೆ ಸಾರ್ವಜನಿಕ ವಿತರಣಾ ಪದ್ಧತಿ ಅಡಿ ಕುಚಲಕ್ಕಿಯನ್ನು ವಿತರಿಸಲು ಅಗತ್ಯವಿರುವ 299.33 ಕೋಟಿಗಳಷ್ಟು ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿ ಯವರು ಒಪ್ಪಿದ್ದು ಕರಾವಳಿಗರ ಪರವಾಗಿ ಮಾನ್ಯ ಮುಖ್ಯಮಂತ್ರಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದ ಅವರು, ಈ ಯೋಜನೆ ಅನುಷ್ಟಾನದಿಂದ 6,21,804 ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಅನುಕೂಲವಾಗಲಿದೆ.

Leave a Comment

Your email address will not be published. Required fields are marked *