Ad Widget .


ಬಿಗ್ ಬಾಸ್ ಒಟಿಟಿ ಶೋ ಟಾಪರ್ ಆದ ರೂಪೇಶ್ ಶೆಟ್ಟಿ, 5ಲಕ್ಷ ನಗದು ಬಹುಮಾನ

ಬೆಂಗಳೂರು: ರೂಪೇಶ್​ ಶೆಟ್ಟಿ ಬಿಗ್ ಬಾಸ್ ಕನ್ನಡ ಒಟಿಟಿ ವಿನ್ನರ್ ಆಗಿದ್ದು, 5 ಲಕ್ಷ ರೂಪಾಯಿ ನಗದು ಬಹುಮಾನ ಪಡೆದಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ ಟಾಪರ್​ ಆದ ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

Ad Widget . Ad Widget .

‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ ಕೊನೆಗೊಂಡಿದ್ದು, ಶುಕ್ರವಾರ (ಸೆ.16) ಅದ್ದೂರಿಯಾಗಿ ಫಿನಾಲೆ ನಡೆಯಿತು. 42 ದಿನಗಳ ಕಾಲ ಎಲ್ಲರ ನಡುವೆ ಸಖತ್​ ಪೈಪೋಟಿ ಇತ್ತು. ಕಡೆಗೂ ನಾಲ್ಕು ಜನರು ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ರಲ್ಲಿ ಸ್ಪರ್ಧಿಸುವ ಚಾನ್ಸ್​ ಪಡೆದಿದ್ದಾರೆ.

Ad Widget . Ad Widget .

ಇದರ ಜೊತೆಗೆ ರೂಪೇಶ್​ ಶೆಟ್ಟಿ ಅವರು ಟಾಪರ್​ ಆಗಿದ್ದಾರೆ. ಅವರಿಗೆ ಫಿನಾಲೆ ವೇದಿಕೆಯಲ್ಲಿ 5 ಲಕ್ಷ ರೂಪಾಯಿ ಬಹುಮಾನ ನೀಡಲಾಯಿತು. ಕೊನೆ ವಾರದಲ್ಲಿ ವಿಶೇಷ ಟಾಸ್ಕ್​ಗಳನ್ನು ನೀಡಲಾಗಿತ್ತು. ಅವುಗಳಲ್ಲಿ ಬೆಸ್ಟ್​ ಪರ್ಫಾರ್ಮೆನ್ಸ್​ ನೀಡುವ ಮೂಲಕ ರೂಪೇಶ್ ಅವರು ಈ ಬಹುಮಾನದ ಮೊತ್ತ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ.

ಹೆಚ್ಚು ವೋಟ್​ ಪಡೆಯುವ ಮೂಲಕ ಟಾಪರ್​ ಸ್ಥಾನ ಗಳಿಸಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶೋ ಸೆಪ್ಟೆಂಬರ್​ 24ರಿಂದ ಆರಂಭ ಆಗಲಿದೆ. ಅದನ್ನು ಕೂಡ ಕಿಚ್ಚ ಸುದೀಪ್​ ಅವರು ನಡೆಸಿಕೊಡಲಿದ್ದಾರೆ.

ಬಿಗ್​ ಬಾಸ್​ ಕನ್ನಡ ಒಟಿಟಿ ಫಿನಾಲೆಯಲ್ಲಿ ಗೆದ್ದ ರೂಪೇಶ್​ ಶೆಟ್ಟಿ, ಸಾನ್ಯಾ ಐಯ್ಯರ್​, ಆರ್ಯವರ್ಧನ್​ ಗುರೂಜಿ ಹಾಗೂ ರಾಕೇಶ್​ ಅಡಿಗ ಜೊತೆಯಲ್ಲಿ ಹಳೇ ಸೀಸನ್​ನ 5 ಸ್ಪರ್ಧಿಗಳು ಕೂಡ 9ನೇ ಸೀಸನ್​ಗೆ ಎಂಟ್ರಿ ನೀಡಲಿದ್ದಾರೆ. ಅವರ ಜೊತೆ 9 ಹೊಸ ಸ್ಪರ್ಧಿಗಳಿಗೆ ಅವಕಾಶ ಸಿಗುತ್ತಿದೆ.

Leave a Comment

Your email address will not be published. Required fields are marked *