ಸುರತ್ಕಲ್: ಬಿಜೆಪಿ ಯುವಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮ ದಿನಾಚರಣೆಯ ಪ್ರಯುಕ್ತ ರಕ್ತದಾನ ಶಿಬಿರ, ಅಂಗಾಂಗ ದಾನ ನೋಂದಣಿ, ಅಯುಷ್ಮಾನ್ ಕಾರ್ಡ್ ನೋಂದಣಿ ಹಾಗೂ ವಿತರಣೆ ಕಾರ್ಯಕ್ರಮ ಕಾವೂರಿನ ಸೊಸೈಟಿ ಹಾಲ್ ನಲ್ಲಿ ಶನಿವಾರ ಜರುಗಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು, “ಪ್ರತೀ ವರ್ಷವೂ ದೇಶ ಕಂಡ ಅತ್ಯುನ್ನತ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಹಲವಾರು ಸಾಮಾಜಿಕ ಚಟುವಟಿಕೆಗಳ ಮೂಲಕ ನಡೆಸುತ್ತಿದ್ದೇವೆ. ಜನಪರ ಸಂಘಟನೆಗಳು, ಸಾವಿರಾರು ಕಾರ್ಯಕರ್ತರು ಇಂದು ಸಮುದ್ರ ತಟವನ್ನು ಸ್ವಚ್ಛ ಮಾಡುವ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದಾರೆ. ಇಂದು ಇತ್ತೀಚಿಗೆ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಅವರ ಹುಟ್ಟುಹಬ್ಬ ಕೂಡಾ ಆಗಿದ್ದು ಅವರನ್ನು ನಾವೆಲ್ಲರೂ ಸ್ಮರಿಸಬೇಕಿದೆ. ಯುವಮೋರ್ಚಾ ಕಾರ್ಯಕರ್ತರು ಪ್ರಧಾನಿ ಮೋದಿಯವರ ಚಿಂತನೆಯೊಂದಿಗೆ ಬೆಳೆಯುತ್ತ ಸಮಾಜಕ್ಕೆ ಮಾರ್ಗದರ್ಶಕರಾಗಿರಬೇಕು” ಎಂದು ಹೇಳಿದರು.
ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ಮಂಗಳೂರು ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ತಿಲಕರಾಜ್ ಕೃಷ್ಣಾಪುರ, ಮೇಯರ್ ಜಯಾನಂದ ಅಂಚನ್, ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ವೇತಾ ಪೂಜಾರಿ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಮಾಜಿ ಉಪ ಮೇಯರ್ ಸುಮಂಗಲ, ಕಾರ್ಪೋರೇಟರ್ ಸುಮಿತ್ರಾ ಕರಿಯ, ಕಿರಣ್ ಕುಮಾರಿ ಕೋಡಿಕಲ್, ವರುಣ್ ಚೌಟ, ಲೋಹಿತ್ ಅಮೀನ್, ಮಂಗಳೂರು ಉತ್ತರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೊಟ್ಟಾರಿ, ರಣ್ ದೀಪ್ ಕಾವೂರು, ಸಂದೀಪ್ ಪಚ್ಚನಾಡಿ, ಶೋಭಾ, ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್ ಕುಮಾರ್, ಶೋಭಾ ಪಚ್ಚನಾಡಿ, ಶೋಧನ್ ಅದ್ಯಪಾಡಿ ಮತ್ತಿತರರು ಉಪಸ್ಥಿತರಿದ್ದರು.