ಸಮಗ್ರ ನ್ಯೂಸ್: ದೇಸಿ ಸೀರೆ ತೊಟ್ಟ ಮಹಿಳೆಯರು ಸೀರೆಯಲ್ಲೇ ಓಡಿ ದೈಹಿಕ ಚಟುವಟಿಕೆ ಕುರಿತು ಜಾಗೃತಿ ಮೂಡಿಸಿದರು.
ತನೈರಾ ಸಂಸ್ಥೆಯು ಭಾನುವಾರ ಬೆಳಗ್ಗೆ ಮಲ್ಲೇಶ್ವರಂನಲ್ಲಿ ಏರ್ಪಡಿಸಿದ್ದ 3 ಕಿ.ಮೀ ಉದ್ದದ ‘ಸೀರೆ ಉಟ್ಟ ನಾರಿಯರ ಓಟದ ಸ್ಪರ್ಧೆ’ಗೆ (ರನ್ ವಿತ್ ಸ್ಯಾರಿ) ಕ್ಷೇತ್ರದ ಶಾಸಕ ಮತ್ತು ಸಚಿವ ಸಿ ಎನ್ ಅಶ್ವತ್ಥ ನಾರಾಯಣ ಚಾಲನೆ ನೀಡಿದರು.
18ನೇ ಅಡ್ಡರಸ್ತೆಯ ಮೈದಾನದಿಂದ ಆರಂಭವಾದ ಈ ಸ್ಪರ್ಧೆಯಲ್ಲಿ ಸಾವಿರಾರು ನಾರಿಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಸಚಿವರು, ಆರೋಗ್ಯದ ಗುಟ್ಟನ್ನು ಅರಿತರೆ ಬದುಕಿನ ಗುಟ್ಟನ್ನೇ ತಿಳಿಯಬಹುದು ಎಂದರು.
ಇದೇ ವೇಳೆ ದೇಸಿ ಉಡುಗೆಯಲ್ಲಿ ಮಹಿಳೆಯರು ಆಟೋಟಗಳಲ್ಲಿ ಭಾಗವಹಿಸಬಹುದು. ಇಂತಹ ಚಟುವಟಿಕೆಗಳಿಂದ ಮಹಿಳೆಯರಿಗೂ ಖುಷಿ ಸಿಗುತ್ತದೆ ಎಂದು ಹೇಳಿದರು.