ಸಮಗ್ರ ನ್ಯೂಸ್: ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಗೌರವಧನ ನೀಡಲು ಸರ್ಕಾರದ ವತಿಯಿಂದ 175.05 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ 2022 -23ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗಿದೆ.
ಈ ಅತಿಥಿ ಶಿಕ್ಷಕರಿಗೆ ಗೌರವ ಧನ ನೀಡಲು ಅನುದಾನ ಬಿಡುಗಡೆ ಮಾಡಲಾಗಿದೆ. ವಿಳಂಬ ಮಾಡದಂತೆ ಬಿಡುಗಡೆಯಾದ ಅನುದಾನವನ್ನು ತಾಲೂಕು ಪಂಚಾಯಿತಿಗಳ ಮೂಲಕ ತಕ್ಷಣವೇ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಲಾಗಿದೆ.
ಪ್ರಾಥಮಿಕ ಶಾಲೆಗಳ 27 ಸಾವಿರ ಅತಿಥಿ ಶಿಕ್ಷಕರಿಗೆ 135.66 ಕೋಟಿ ರೂ., ಪ್ರೌಢಶಾಲೆಗಳ 5159 ಅತಿಥಿ ಶಿಕ್ಷಕರಿಗೆ 39.39 ಕೋಟಿ ರೂ. ನೀಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಿದ್ದು, ಸರ್ಕಾರ 175.05 ಕೋಟಿ ರೂ. ನೀಡಲಾಗಿದೆ.