ಮಕ್ಕಳಿಲ್ಲ ಎಂದು ಕೊರಗಿ ಆತ್ಮಹತ್ಯೆ ಮಾಡಿಕೊಂಡ ದಂಪತಿ| ಒಂದೇ ಸೀರೆಗೆ ಕೊರಳೊಡ್ಡಿದ ದುರ್ದೈವಿಗಳು

ಸಮಗ್ರ ನ್ಯೂಸ್: ಮಕ್ಕಳಿಲ್ಲ ಎಂಬ ಕೊರಗಿನಿಂದ ಜಿಗುಪ್ಸೆಗೆ ಒಳಗಾದ ದಂಪತಿಯ ಎರಡು ವರ್ಷಗಳ ದಾಂಪತ್ಯ ಒಂದು ಸೀರೆಯಲ್ಲಿ ಅಂತ್ಯವಾಗಿದ್ದು, ಪತಿ-ಪತ್ನಿ ಇಬ್ಬರೂ ಒಂದೇ ಸೀರೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget ... ..

ಚಿಕ್ಕಬಳ್ಳಾಪುರದ ತಾಲ್ಲೂಕಿನ ಸೂಲಿಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಟೋಚಾಲಕನಾಗಿದ್ದ ಚಂದ್ರಶೇಖರ್​ (28) ಮತ್ತು ಶಶಿಕಲಾ (22) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮಕ್ಕಳಿಲ್ಲ ಎಂಬ ಕೊರಗಿನಿಂದಾಗಿ ಇವರು ಈ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Ad Widget

ಮನೆಯೊಳಗಿದ್ದ ದಂಪತಿ ಎಷ್ಟು ಹೊತ್ತಾದರೂ ಹೊರಗೆ ಕಾಣಿಸಿಕೊಳ್ಳದ ಕಾರಣ ಅನುಮಾನಗೊಂಡ ಸ್ಥಳೀಯರು ಬಾಗಿಲು ತೆರೆದು ನೋಡಿದಾಗ ಇಬ್ಬರೂ ಒಂದೇ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿತ್ತು. ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳಿಸಿಕೊಟ್ಟಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *