ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಕಾನ್ಸ್‌ ಟೇಬಲ್‌ ಶಿವಕುಮಾರ್‌ ಮೇಲೆ ಸುಲಿಗೆ ಆರೋಪ ಕೇಳಿ ಬಂದಿದ್ದು, ಸುಮಾರು ಮೂರು ಲಕ್ಷ ಹಣ ವಸೂಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ.

. Ad Widget . Ad Widget

ಸಹಕಾರದ ನಗರದ ಉದ್ಯಮಿಗೆ ಬೆದರಿಸಿ ಹಣ ಪಡೆದ ಆರೋಪ ಕೇಳಿಬಂದಿದೆ.

. Ad Widget . . Ad Widget . Ad Widget

ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿಐಗೆ ಸಹಕಾರ ನಗರದ ಉದ್ಯಮಿ ಯೋಗೇಶ್‌ ದೂರು ನೀಡಿದ್ದಾರೆ. ಹಾಲು ಉದ್ಯಮಿಯಾಗಿರುವ ಯೋಗೇಶ್‌ ಗೆ ಪೊಲೀಸ್‌ ಪೇದೆ ಶಿವಕುಮಾರ್‌ ಕ್ರಿಕೆಟ್‌ ಬೆಟ್ಟಿಂಗ್‌ ವಿಚಾರವಾಗಿ ಹೆದರಿಸಿದ್ದರು ಎನ್ನಲಾಗಿದೆ.

ಮೂರು ಲಕ್ಷ ಹಣ ವಸೂಲಿ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ.

ಈ ದೂರಿನ ಪ್ರಕಾರ ಡಿಸಿಪಿ ಅನೂಪ್‌ ಶೆಟ್ಟಿ ಯಲಹಂಕ ಎಸಿಪಿಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

Leave a Comment

Your email address will not be published. Required fields are marked *