ಈ ವರ್ಷದಲ್ಲೇ ಶಾಲಾ ಕಾಲೇಜುಗಳಲ್ಲಿ ಭಗವದ್ಗೀತೆ ‌ಭೋದನೆ ಪ್ರಾರಂಭ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ಈ ವರ್ಷದಿಂದಲೇ ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಭೋದನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.

Ad Widget ... ..

ವಿಧಾನ ಪರಿಷತ್‌ ಕಲಾಪದಲ್ಲಿ ಈ ವಿಚಾರವಾಗಿ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ? ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನೆ ಮಾಡಿದ್ದರು.

Ad Widget

ಇದಕ್ಕೆ ಶಿಕ್ಷಣ ಸಚಿವರು ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.

Leave a Comment

Your email address will not be published. Required fields are marked *