ಸುಳ್ಯ: ಗಿಡಗಂಟಿಗಳಿಂದ ಕೂಡಿದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಮುಕ್ತಿ ನೀಡಿದ ಮೆಸ್ಕಾಂ

ಸಮಗ್ರ ನ್ಯೂಸ್: ಸುಳ್ಯ ನಗರ ಸಮೀಪದ ನಾಗಪಟ್ಟಣಕ್ಕೆ ಹೋಗುವ ರಸ್ತೆ ಕಲ್ಲು ಮುಟ್ಟಲು ಬಸ್ ಸ್ಟಾಂಡಿನ ಎದುರುಗಡೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬ, ಎಚ್ ಪಿ ಲೈನಿನ ಕಂಬಕ್ಕೆ ಸಂಪೂರ್ಣವಾಗಿ ಮುಚ್ಚಿ ಹೋಗಿತ್ತು.

Ad Widget ... ..

ಈ ಬಗ್ಗೆ ಅಂಬೇಡ್ಕರ್ ರಕ್ಷಣಾ ವೇದಿಕೆಯ
ಜಿಲ್ಲಾಧ್ಯಕ್ಷರಾದ ಪಿ.ಸುಂದರ ಪಾಟಾಜೆಯವರು ‘ಸಮಗ್ರ ಸಮಾಚಾರ’ಕ್ಕೆ ಮಾಹಿತಿ ನೀಡಿದ್ದರು. ಈ ಕುರಿತು “ವಿದ್ಯುತ್ ಕಂಬವನ್ನು ವಶ ಪಡಿಸಿಕೊಂಡ ಗಿಡ-ಮರ” ಎಂಬ ಶೀರ್ಷಿಕೆಯಲ್ಲಿ ವರದಿ ಬಿತ್ತರಿಸಿತ್ತು.

Ad Widget

ಇದಲ್ಲದೆ ಸ್ವಚ್ಛ ಗೊಳಿಸದಿದಲ್ಲಿ ಮೆಸ್ಕಾಂ ಇಲಾಖೆಯ ಮುಂಭಾಗ ಪ್ರತಿಭಟನೆ ಮಾಡುವುದಾಗಿ ಕೂಡ ಅಂಬೇಡ್ಕರ್ ರಕ್ಷಣಾ ವೇದಿಕೆ ಎಚ್ಚರಿಕೆ ನೀಡಿತ್ತು. ಇದೀಗ ಅದಕ್ಕೆ ಸ್ಪಂದಿಸಿದ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಸೆ.19 ಸೋಮವಾರದಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ನ ಕಂಬ ಬಳ್ಳಿಗಳನ್ನು ಮತ್ತು ಗಿಡಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದ್ದಾರೆ.

ಇದರಿಂದ ಕಲ್ಲು ಮುಟ್ಟಲು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಅಂಬೇಡ್ಕರ್ ರಕ್ಷಣಾ ವೇದಿಕೆಗೆ ಅಭಿನಂದನೆ ಸಲ್ಲಿಸಿದರು.

Leave a Comment

Your email address will not be published. Required fields are marked *