Ad Widget .

 ಸಿನಿಮಾ ಶೂಟಿಂಗ್ ವೇಳೆ ಬಾಲಿವುಡ್ ಖ್ಯಾತ ನಟನ ಮೇಲೆ ಕಲ್ಲು ತೂರಾಟ

ಸಮಗ್ರ ನ್ಯೂಸ್:  ಕಾಶ್ಮೀರದ ಸುಂದರ ಕಣಿವೆಗಳಲ್ಲಿ ಸಿನಿಮಾ ಶೂಟಿಂಗ್‌ ಮಾಡುತ್ತಿದ್ದ ಬಾಲಿವುಡ್‌ ಖ್ಯಾತ ನಟನ ಮೇಲೆ ಕಲ್ಲು ತೂರಾಟ ನಡೆದಿದೆ.

Ad Widget . Ad Widget .

ಬಾಲಿವುಡ್‌ನ ಖ್ಯಾತ ನಟ ಇಮ್ರಾನ್ ಹಶ್ಮಿ ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Ad Widget . Ad Widget .

ನಟ ಇಮ್ರಾನ್ ಹಶ್ಮಿ ಈ ದಿನಗಳಲ್ಲಿ ತಮ್ಮ ಮುಂಬರುವ ಚಿತ್ರದ ಚಿತ್ರೀಕರಣವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಸುತ್ತಿದ್ದಾರೆ.

ಇಮ್ರಾನ್ ಹಶ್ಮಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಮುಂಬರುವ ಚಿತ್ರ ‘ಗ್ರೌಂಡ್ ಜೀರೋ’ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ.

ಪಹಲ್ಗಾಮ್‌ನಲ್ಲಿ ಎಲ್ಲಾ ಶೂಟಿಂಗ್ ಕೆಲಸಗಳು ನಡೆಯುತ್ತಿವೆ, ಆದರೆ ಇಲ್ಲಿ ಇಮ್ರಾನ್ ಹಶ್ಮಿ ಅವರ ಮೇಲೆ ಕಲ್ಲು ತೂರಾಟ ನಡೆಸಲಾಯಿತು.

ಇತ್ತೀಚೆಗಷ್ಟೇ ಇಮ್ರಾನ್ ಹಶ್ಮಿ ಶೂಟಿಂಗ್ ಮುಗಿಸಿ ಸೆಟ್‌ನಿಂದ ಹೊರಗೆ ಬಂದಾಗ ದುಷ್ಕರ್ಮಿಗಳು ಅವರ ಮೇಲೆ ಕಲ್ಲು ಎಸೆದಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದ್ದಾರೆ.

Leave a Comment

Your email address will not be published. Required fields are marked *