Ad Widget .

ವಿಜಯಪುರ: ಜಾನುವಾರುಗಳಿಗೆ ವ್ಯಾಪಕವಾಗಿ ಹಬ್ಬುತ್ತಿರುವ ಚರ್ಮಗಂಟು ರೋಗ| ಸಾಗಾಟ‌ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಜಾನುವಾರಗಳಲ್ಲಿ ಚರ್ಮಗಂಟು ವ್ಯಾಪಕವಾಗಿ ಹರಡುತ್ತಿರುವ ಕಾರಣ ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಾನುವಾರು ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ಆದೇಶ ಹೊರಡಿಸಿದ್ದಾರೆ.

Ad Widget . Ad Widget .

ವಿಜಯಪುರ ಜಿಲ್ಲೆಯ ಹತ್ತಿರದ ಮಹಾರಾಷ್ಟ್ರ ರಾಜ್ಯದಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗವು ವ್ಯಾಪಕವಾಗಿ ಹರಡುತ್ತಿದೆ. ವಿಜಯಪುರ ಜಿಲ್ಲೆಯು ಮಹಾರಾಷ್ಟ್ರ ಗಡಿಭಾಗದಲ್ಲಿದ್ದು, ಇಲ್ಲಿಯೂ ಸಹ ಅಲ್ಲಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊಳ್ಳುತ್ತಿದೆ. ಮುಂಬರುವ ದಿನಗಳಲ್ಲಿ ಇದು ಇನ್ನೂ ಉಲ್ಬಣವಾಗದಂತೆ ರೋಗ ಹರಡುವಿಕೆಯನ್ನು ತಡೆಗಟ್ಟಲು ಜಿಲ್ಲೆಯಲ್ಲಿ ಗೋಟಪಾಕ್ಸ್ ಲಸಿಕೆಗಳನ್ನು ಎಲ್ಲ ತಾಲೂಕುಗಳಗೆ ವಿತರಿಸಲು ಕ್ರಮಕೈಗೊಳ್ಳಲಾಗುತ್ತದೆ.

Ad Widget . Ad Widget .

ಜಿಲ್ಲೆಯ ಪಶುವೈದ್ಯಾಧಿಕಾರಿಗಳು ತಾಂತ್ರಿಕ ಸಿಬ್ಬಂದಿಯ ತಂಡದೊಂದಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಜಾನುವಾರುಗಳಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ. ರೋಗ ಹರಡುವುದನ್ನು ನಿಯಂತ್ರಿಸಲು ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರುಗಳ ಸಾಗಾಣಿಕೆಯನ್ನು ನಿಷೇಧಿಸಿ ಆದೇಶಿಸಲು ಉಪ ನಿರ್ದೇಶಕರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ವಿಜಯಪುರ ಇವರು ಕೋರಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಜಾನುವಾರುಗಳಗೆ ಚರ್ಮಗಂಟು ರೋಗ

ತಡೆಗಟ್ಟಲು ಮುಂಜಾಗ್ರತ ಕ್ರಮವಾಗಿ 17-09-2022 ರಿಂದ 16-10-2022ರವರೆಗೆ ಕರ್ನಾಟಕ ಅನಿಮಲ್ ಡಿಸೀಜ್ ಆ್ಯಕ್ಟ್ 1961ರಡಿ ಮತ್ತು ಸಿಆರ್‌ಪಿಸಿ ಕಾಯ್ದೆ 1973 ಕಲಂ 144ರ ಮೇರೆಗೆ ವಿಜಯಪುರ ಜಿಲೆಯಾದ್ಯಂತ ಜಾನುವಾರುಗಳ ಸಂತೆ ಜಾನುವಾರು ಜಾತ್ರೆ ಮತ್ತು ಜಾನುವಾರುಗಳ ಸಾಗಾಣಿಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *