Ad Widget .

ಬಿಕ್ಷಾಟನೆ ನಿರ್ಮೂಲನೆಯ ಜನಜಾಗೃತಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿಯಿಂದ ಹಸಿರು ನಿಶಾನೆ

ಸಮಗ್ರ ನ್ಯೂಸ್: ಬಿಕ್ಷಾಟನೆ ನಿರ್ಮೂಲನೆಯ ಜನಜಾಗೃತಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ ಅವರು ಸೆ. 20ರಂದು, ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಹಸಿರು ನಿಶಾನೆ ತೋರಿದರು.

Ad Widget . Ad Widget .

ಈ ವೇಳೆ ಮಾತನಾಡಿದ ಅವರು, ಕರ್ನಾಟಕ ಬಿಕ್ಷಾಟನೆ ನಿಷೇಧ ಅಧಿನಿಯಮ 1975ರ ಸೆಕ್ಷನ್ 3ರನ್ವಯ ಭೀಕ್ಷೆ ಬೇಡುವುದನ್ನು ನಿಷೇಧಿಸಲಾಗಿದೆ. ಭಿಕ್ಷೆ ಬೇಡುವುದು ಮತ್ತು ನೀಡುವುದು ಅಪರಾಧವಾಗಿದೆ. ಈ ಬಗ್ಗೆ ಸಾರ್ವಜನಿಕರು ಅರಿಯಬೇಕು ಎಂದು ತಿಳಿಸಿದರು.

Ad Widget . Ad Widget .

ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮನಗೌಡ ಕನ್ನೊಳ್ಳಿ ಅವರು ಮಾತನಾಡಿ, ವಿಜಯಪುರ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಕೇಂದ್ರ ಪರಿಹಾರ ಸಮಿತಿ ಮತ್ತು ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ವಿಜಯಪುರ ಹಾಗೂ ಬಾಗಲಕೋಟೆ ಅವರಿಂದ ಈ ಕಾರ್ಯಕ್ರಮ ನಡೆಯುತ್ತಿದೆ. ವಿಜಯಪುರ ನಗರದಲ್ಲಿ ವಿವಿಧ ಸ್ಥಳಗಳಲ್ಲಿ ಭಿಕ್ಷಾಟನೆ ಬೇಡುವುದು ಮತ್ತು ನೀಡುವುದು ಅಪರಾಧ ಕುರಿತು ಪ್ರಚಾರ ಮಾಡಲಾಗುತ್ತದೆ. ಭಿಕ್ಷುಕರ ಸಹಾಯವಾಣಿ ಸಂಖ್ಯೆ:10581ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದರು.

ಈ ವೇಳೆ ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕರಾದ ಬಸವರಾಜ್ ಎಸ್ ನಾಟಿಕರ್., ಸ್ಥಳೀಯ ನಿರಾಶ್ರಿತರ ಪರಿಹಾರ ಕೇಂದ್ರ ವಿಜಯಪುರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *