Ad Widget .

ಕೆಎಸ್​ಎಪಿಎಸ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

ಸಮಗ್ರ‌ ನ್ಯೂಸ್: ಕರ್ನಾಟಕ ರಾಜ್ಯ ಏಡ್ಸ್​ ಪ್ರಿವೆನ್ಷನ್​ ಸೊಸೈಟಿಯಿಂದ ಕ್ಲಸ್ಟರ್​ ಪ್ರೋಗ್ರಾಂ ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 14, 2022.

Ad Widget . Ad Widget .

ಈ 11 ಹುದ್ದೆಗಳಲ್ಲಿ ಮೂರು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. 2023ರ ಬಳಿಕ ಅಭ್ಯರ್ಥಿಯ ಕಾರ್ಯ ಕ್ಷಮತೆ ಆಧಾರದ ಮೇಲೆ ಒಂದು ವರ್ಷ ಅಧಿಕಾರ ವಿಸ್ತರಣೆ ಮಾಡಲಾಗುವುದು.

Ad Widget . Ad Widget .

ಹುದ್ದೆ ಮಾಹಿತಿ ಹುದ್ದೆ ವಿವರ:
ಸಂಸ್ಥೆಯ ಹೆಸರು: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ (KSAPS)
ಹುದ್ದೆಯ ಹೆಸರು: ಕ್ಲಸ್ಟರ್ ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗಳ ಸಂಖ್ಯೆ 11
ಉದ್ಯೋಗ ಸ್ಥಳ ಕರ್ನಾಟಕ
ವೇತನ: 54300 ರೂ. ಪ್ರತಿ ತಿಂಗಳು

ಶೈಕ್ಷಣಿಕ ಅರ್ಹತೆ: ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ, ಸಾರ್ವಜನಿಕ ಆರೋಗ್ಯ/ಆರೋಗ್ಯ ರಕ್ಷಣೆ/ನಿರ್ವಹಣೆ/ಸಾಮಾಜಿಕ ವಿಜ್ಞಾನ/ಮನೋವಿಜ್ಞಾನ/ಅನ್ವಯಿಕ ಸೋಂಕುಶಾಸ್ತ್ರ/ಅಂಕಿಅಂಶಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 50 ವರ್ಷಗಳು ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಯ ನಿಯಮಗಳ ಪ್ರಕಾರ

ಅರ್ಜಿ ಸಲ್ಲಿಕೆ: ಆಫ್​ಲೈನ್​
ಆಯ್ಕೆ ಪ್ರಕ್ರಿಯೆ
ಲಿಖಿತ ಪರೀಕ್ಷೆ, ಕಂಪ್ಯೂಟರ್ ಪರೀಕ್ಷೆ ಮತ್ತು ಸಂದರ್ಶನ, ಅರ್ಜಿ ಸಲ್ಲಿಕೆ ವಿಳಾಸ:
ಯೋಜನಾ ನಿರ್ದೇಶಕರು, ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಆರೋಗ್ಯ ಸೌಧ, 4ನೇ ಮಹಡಿ, ಪೂರ್ವ ಭಾಗ, ಕುಷ್ಠರೋಗ ಆಸ್ಪತ್ರೆ ಆವರಣ, 1ನೇ ಕ್ರಾಸ್, ಮಾಗಡಿ ರಸ್ತೆ, ಬೆಂಗಳೂರು-560023

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 15 ಸೆಪ್ಟೆಂಬರ್​ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ಅಕ್ಟೋಬರ್ 2022

ಪ್ರಮುಖ ಲಿಂಕ್‌ಗಳು:
ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: ksaps.karnataka.gov.in

ಅರ್ಜಿ ಸಲ್ಲಿಕೆ ಪ್ರಕ್ರಿಯೆ:
ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಂಡು ಮುಂದುವರೆಯಿರಿ.

-ಅಧಿಕೃತ ಅಧಿಸೂಚನೆಯಿಂದ ಅರ್ಜಿ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

  • ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ನೀಡಿ. ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಬಳಿಕ ಸಲ್ಲಿಸು ಬಟನ್​ ಕ್ಲಿಕ್ ‌ಮಾಡಿ.

4 thoughts on “ಕೆಎಸ್​ಎಪಿಎಸ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ”

Leave a Comment

Your email address will not be published. Required fields are marked *