Ad Widget .

ರಾಜಧಾನಿಯ ಹಲವೆಡೆ ‘ಪೇ-ಸಿಎಂ’ ಪೋಸ್ಟರ್| ಮೂರು ಠಾಣೆಯಲ್ಲಿ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಬೆಂಗಳೂರು ನಗರದಾದ್ಯಂತ ಕ್ಯೂಆರ್ ಕೋಡ್‌ನೊಂದಿಗೆ ಪೇ-ಸಿಎಂ ಪೋಸ್ಟರ್‌ಗಳು ಕಂಡು ಬಂದಿದ್ದು, ಮೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ‘ಪೇ-ಸಿಎಂ’ ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ. ಈ ಪ್ರಕರಣ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ನೀಡಿರುವ ದೂರಿನ ಅನ್ವಯ ಪಬ್ಲಿಕ್ ಪೋಸ್ಟ್ ಡಿಸ್ಫಿಗರ್ಮೆಂಟ್ ಆಯಕ್ಟ್ ಅಡಿ ಕೇಂದ್ರ ವಿಭಾಗದ ಮೂರು ಠಾಣೆಗಳಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ.

Ad Widget . Ad Widget .

ಬೆಂಗಳೂರಿನ ಆರ್.ಟಿ.ನಗರ, ಸದಾಶಿವನಗರ, ಶೇಷಾದ್ರಿಪುರಂ, ಭಾರತಿನಗರ, ಹೈಗ್ರೌಂಡ್ಸ್, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.. ಕೇಸ್ ದಾಖಲಿಸಿಕೊಂಡ ಪೊಲೀಸರು ಪೋಸ್ಟರ್ ಅಂಟಿಸಿದವರಿಗಾಗಿ ಹುಡುಕಾಟ ನಡೆಸಿದ್ದಾರೆ.

Leave a Comment

Your email address will not be published. Required fields are marked *