ಸಮಗ್ರ ನ್ಯೂಸ್: ಪಿಎಂ ಕೇರ್ಸ್ ಫಂಡ್ ಟ್ರಸ್ಟಿಯಾಗಿ ರತನ್ ಟಾಟಾ, ಸಲಹಾ ಮಂಡಳಿಗೆ ಸುಧಾ ಮೂರ್ತಿ ಅವರು ನೇಮಕಗೊಂಡಿದ್ದಾರೆ.
ಪ್ರಧಾನ ಮಂತ್ರಿಗಳ ಕಾರ್ಯಾಲಯ ಈ ಟ್ರಸ್ಟಿಗಳನ್ನು ಪಿಎಂ ಕೇರ್ಸ್ ಫಂಡ್ನ ಅವಿಭಾಜ್ಯ ಅಂಗವಾಗಿ ಕಾರ್ಯನಿರ್ವಹಿಸಲು ಸ್ವಾಗತಿಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಿಎಂ ಕೇರ್ಸ್ ಫಂಡ್ ಇತರ ಟ್ರಸ್ಟಿಗಳಾಗಿದ್ದಾರೆ.
ಪ್ರಧಾನಮಂತ್ರಿ ಕೇರ್ಸ್ ಫಂಡ್ ಟ್ರಸ್ಟ್ಗೆ ಸುಪ್ರೀಂಕೋರ್ಟ್ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಕೆ ಟಿ ಥಾಮಸ್, ಮಾಜಿ ಡೆಪ್ಯೂಟಿ ಸ್ಪೀಕರ್ ಕರಿಯಾ ಮುಂಡಾ ನಾಮನಿರ್ದೇಶನಗೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಪಿಎಂ ಕೇರ್ಸ್ ಫಂಡ್ನ ಟ್ರಸ್ಟಿಗಳ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ ಒಂದು ದಿನದ ನಂತರ ಈ ಘೋಷಣೆ ಹೊರಡಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಪಿಎಂ ಕೇರ್ಸ್ ಪಂಡ್ಗೆ ಕೊಡುಗೆ ನೀಡಿದ್ದಕ್ಕಾಗಿ ಅಭಿನಂದಿಸಿದ್ದಾರೆ.
ದೇಶದ ತುರ್ತು ಪರಿಸ್ಥಿತಿಯಲ್ಲಿ ಪಿಎಂ ಕೇರ್ಸ್ ಫಂಡ್ ಸೃಷ್ಟಿ ಮಾಡಲಾಗಿದೆ.
ಕರ್ನಾಟಕದವರೇ ಆಗಿರುವ ಸುಧಾಮೂರ್ತಿ ಅವರನ್ನು ಪಿಎಂ ಕೇರ್ಸ್ ಫಂಡ್ಗೆ ನೇಮಿಸಿರುವುದಕ್ಕೆ ಶ್ಲಾಘನೆ ವ್ಯಕ್ತವಾಗಿದೆ.