Ad Widget .

ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ – ಆರಗ ಜ್ಞಾನೇಂದ್ರ

ಬೆಂಗಳೂರು: ದೇಶದಲ್ಲಿ ಟೆರರಿಸ್ಟ್‌ಗಳನ್ನ ಹುಟ್ಟುಹಾಕಿದ್ದೇ ಕಾಂಗ್ರೆಸ್ , ಟೆರಸ್ಸ್‌ಗಳು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.

Ad Widget . Ad Widget .

ಕರ್ನಾಟಕದ ವಿವಿಧ ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ತನ್ನ ದಾಳಿ ಮುಂದುವರಿಸಿವೆ. ದೇಶಾದ್ಯಂತ ಇಂದು ಬೆಳ್ಳಂಬೆಳಿಗ್ಗೆಯಿಂದಲೇ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್‌ಐಎ, ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದೆ.

Ad Widget . Ad Widget .

ಈ ಕುರಿತು ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಖಚಿತ ಮಾಹಿತಿ ಮೇರೆಗೆ ಎಸ್‌ಡಿಪಿಐ, ಪಿಎಫ್‌ಐ ಸಂಘಟನೆಗಳ ಮೇಲೆ ಎನ್‌ಐಎ ಹಾಗೂ ಪೊಲೀಸರು ದಾಳಿ ನಡೆಸಿದ್ದಾರೆ. ಏಕತೆ, ಸಮಗ್ರತೆ ಹಾಳು ಮಾಡೋ, ಜೀವಹಾನಿ ಮಾಡುವ ಸಂಘಟನೆಗಳು ಹಲವು ಕೃತ್ಯಗಳ ಹಿಂದೆ ಇವೆ. ಆದ್ದರಿಂದ ಮಾಹಿತಿಯ ಮೇರೆಗೆ ರೇಡ್ ಆಗಿದೆ. ಸಂಘಟನೆಯ ಕೆಲ ಮುಖಂಡರನ್ನು ಈಗ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ನಾನು ಶಿವಮೊಗ್ಗ ಪೊಲೀಸರಿಗೆ ಅಭಿನಂದನೆ ಸಲ್ಲಿಸ್ತೇನೆ. ಶಿವಮೊಗ್ಗ ಪ್ರಕರಣದಲ್ಲಿ ಬಾಂಬ್ ತಯಾರು ಮಾಡಲಾಗಿತ್ತು. ಅದನ್ನು ಟ್ರಯಲ್ ಕೂಡ ಮಾಡಿದ್ದಾರೆ. ಅವರ ಬಂಧನದಿಂದ ರಕ್ತಹಾನಿ ಜೀವಹಾನಿ ತಡೆಗಟ್ಟಲಾಗಿದೆ.

ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಇಂತಹ ಸಂದರ್ಭದಲ್ಲಿ ಪ್ರತಿಭಟನೆ ಮಾಡೋದು ಸರಿಯಲ್ಲ. ದೇಶದಲ್ಲಿ ಎಲ್ಲರೂ ಕಾನೂನು ಪಾಲಿಸಬೇಕು. ತಪ್ಪಿತಸ್ಥರು ಅಲ್ಪಸಂಖ್ಯಾತರೋ ಇಲ್ವೋ ಅಂತ ಪೊಲೀಸರು ಕೆಲಸ ಮಾಡೋಕೆ ಆಗಲ್ಲ. ಟೆರರಿಸ್ಟ್ಗಳನ್ನು ಹುಟ್ಟು ಹಾಕಿದ್ದೇ ಕಾಂಗ್ರೆಸ್, ಟೆರರಿಸ್ಟ್ಗಳನ್ನು ತಪ್ಪಿಸಿಕೊಳ್ಳಲು ಅವಕಾಶ ಕೊಟ್ಟಿದ್ದೇ ಕಾಂಗ್ರೆಸ್ ಅವರು ದೇಶದ ದೃಷ್ಟಿಯಿಂದ ಯೋಚನೆ ಮಾಡಬೇಕು ಎಂದು ಕಿಡಿ ಕಾರಿದ್ದಾರೆ.

Leave a Comment

Your email address will not be published. Required fields are marked *