Ad Widget .

ಹಿಜಾಬ್ ವಿವಾದ ವಿಚಾರಣೆ ಮುಕ್ತಾಯ| ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ಸಮಗ್ರ‌ ನ್ಯೂಸ್: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಕುರಿತ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಮುಕ್ತಾಯಗೊಂಡಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ.

Ad Widget . Ad Widget .

ಹಿಜಾಬ್ ಕುರಿತು ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ವಾದ-ಪ್ರತಿವಾದಗಳನ್ನು ಆಲಿಸಿದ್ದು, ತೀರ್ಪು ಕಾಯ್ದಿರಿಸಿದೆ. ಕಳೆದ 10 ದಿನಗಳಿಂದ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿತ್ತು.

Ad Widget . Ad Widget .

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅಥವಾ ಯಾವುದೇ ಧಾರ್ಮಿಕ ಚಿಹ್ನೆಗಳಿಗೆ ಅವಕಾಶವಿಲ್ಲ, ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಕೆಯಾಗಿತ್ತು. ಇದೀಗ ವಾದ-ಪ್ರತಿವಾದ ಆಲಿಸಿದ ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.

Leave a Comment

Your email address will not be published. Required fields are marked *