ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್| ಸಾರಿಗೆ ಇಲಾಖೆಯಲ್ಲಿ 2814 ಚಾಲಕ, ನಿರ್ವಾಹಕ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಹೊಸದಾಗಿ 2814 ಚಾಲಕರು ಹಾಗೂ ನಿರ್ವಾಹಕರ ನೇಮಕಾತಿಗೆ ತೀರ್ಮಾನಿಸಲಾಗಿದೆ. ಸಾರಿಗೆ ಸಚಿವ ಶ್ರೀರಾಮುಲು ವಿಧಾನಸಭೆಯಲ್ಲಿ ಈ ಮಾಹಿತಿ ನೀಡಿದ್ದಾರೆ.

Ad Widget ... ..

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ನಿಂಬಣ್ಣನವರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.ಕೊರೋನಾ ಕಾರಣದಿಂದ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಚಾಲನೆ ನೀಡಲಾಗಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

Ad Widget

2814 ಸಿಬ್ಬಂದಿ ನೇಮಕ ಮಾಡಲಾಗುವುದು. ಮತ್ತು ಅಗತ್ಯ ಇರುವ ಕಡೆ ನಿಯೋಜಿಸಲಾಗುವುದು ಎಂದು ಶ್ರೀರಾಮುಲು ಮಾಹಿತಿ ನೀಡಿದ್ದಾರೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಳೆದ 2 ವರ್ಷಗಳಿಂದ ಯಾವುದೇ ಹೊಸ ಬಸ್‌ಗಳನ್ನು ಖರೀದಿಸಿಲ್ಲ.

ಮುಂದಿನ ದಿನಗಳಲ್ಲಿ ಹೊಸ ಬಸ್ ಖರೀದಿಸಿ ಅಗತ್ಯ ಇರುವ ಕಡೆ ಸೇವೆಗೆ ನಿಯೋಜಿಸಲಾಗುವುದು ಎಂದು ಶ್ರೀರಾಮುಲು ತಿಳಿಸಿದ್ದಾರೆ

Leave a Comment

Your email address will not be published. Required fields are marked *