ಪೇ ಸಿಎಂ ಪೋಸ್ಟರ್ ಕೇಸ್; 8 ಮಂದಿಯ ಬಂಧನ

ಬೆಂಗಳೂರು : ‘ಪೇ ಸಿಎಂ ಪೋಸ್ಟರ್’ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ ಮೂರು ಮಂದಿಯನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

Ad Widget ... ..

ಈ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲೀಸರು ಇದೀಗ ಮತ್ತೆ ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Ad Widget

ಬೆಳಗ್ಗೆ ಐದು ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಸರ್ಕಾರ ವಿರುದ್ಧ ಶೇ 40 ಕಮಿಷನ್ ಆರೋಪ ಮಾಡಿರುವ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಮೂಲಕ ಬೃಹತ್ ಅಭಿಯಾನ ಆರಂಭಿಸಿದೆ.

ಸದ್ಯ ಈ ವಿಚಾರ ಬಿಜೆಪಿ-ಕಾಂಗ್ರೆಸ್ ನಡುವೆ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ. ಪೋಸ್ಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದುವರೆಗೆ 8 ಮಂದಿಯನ್ನು ಬಂಧಿಸಿದ್ದಾರೆ

Leave a Comment

Your email address will not be published. Required fields are marked *