ಸಮಗ್ರ ನ್ಯೂಸ್: ನ್ಯಾಯಬೆಲೆ ಅಂಗಡಿಯಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಪಡಿತರದಾರರು ಪರದಾಡಿದ ಘಟನೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಸಮೀಪದ ಅಬ್ರುಗುಡಿಗೆಯಲ್ಲಿ ನಡೆದಿದೆ.

ಕಳೆದ ಕೆಲದಿನಗಳಿಂದ ಸರ್ವರ್ ಸಮಸ್ಯೆಯಿಂದ ಪಡಿತರದಾರರು ನ್ಯಾಯಬೆಲೆ ಅಂಗಡಿಯಲ್ಲಿ ಸಂಜೆಯವರೆಗೂ ಕಾದು ಹಿಂದಿರುಗುವಂತಾಗಿದೆ.
ಈ ಭಾಗದಲ್ಲಿ ಬಹುತೇಕರೂ ಕೂಲಿ ಕಾರ್ಮಿಕರಾಗಿದ್ದು ಕೆಲಸಕ್ಕೆ ರಜೆ ಮಾಡಿ ನ್ಯಾಯಬೆಲೆ ಅಂಗಡಿಗೂ ಬಂದರೂ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ಪಡೆಯಲು ಸಾಧ್ಯವಾಗಿಲ್ಲ. ಹಳ್ಳಿಗಾಡು ಪ್ರದೇಶದಿಂದ ಬರುವ ಮಹಿಳೆಯರು, ವೃದ್ದರು ದಿನಗಟ್ಟಲೆ ನ್ಯಾಯಬೆಲೆ ಅಂಗಡಿ ಬಾಗಿಲು ಕಾಯುವಂತಾಗಿದೆ.

ಅರಮನೆ ತಲಗೂರು ಗ್ರಾಮದ ವೃದ್ದೆ ಸುಂದರಮ್ಮ ಸುಮಾರು 15 ಕಿ.ಮಿ ದೂರದಿಂದ ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬಂದಿದ್ದು ಬೆಳಿಗ್ಗೆ 9 ರಿಂದ ಸಂಜೆ 5-30 ರವರೆಗೂ ಕಾದರೂ ಸರ್ವರ್ ಸಮಸ್ಯೆಯಿಂದ ಪಡಿತರ ಪಡೆಯಲು ಸಾಧ್ಯವಾಗಲಿಲ್ಲ. ಕೆಲ ಮಹಿಳೆಯರು ತಮ್ಮ ಮಕ್ಕಳೊಂದಿಗೆ ಬಂದು ಕಾದಿ ಬಸವಳಿದ ದೃಶ್ಯ ಮನಕಲಕುವಂತಿತ್ತು.